Breaking News

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಡಿಸೆಂಬರ್ ನಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ

Spread the love

ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಸರ್ಕಾರದ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ , ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ ಈ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮಕ್ಕಳಲ್ಲಿನ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ , ಈ ಹಿನ್ನೆಲೆ ಮಕ್ಕಳಿಗೆ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ