Breaking News
Home / ರಾಜಕೀಯ / ನಾನು ಲೋಕಸಭಾ ಚುನಾವಣೆಯಲ್ಲಿ ನನ್ನ ತಮ್ಮ ನನ್ನ ಸೋಲಿಸಿ ಮಂಗಳಾ ಅಂಗಡಿಯನ್ನು ಗೆಲ್ಲಿಸಿ ತಂದಿದ್ದೇನೆ

ನಾನು ಲೋಕಸಭಾ ಚುನಾವಣೆಯಲ್ಲಿ ನನ್ನ ತಮ್ಮ ನನ್ನ ಸೋಲಿಸಿ ಮಂಗಳಾ ಅಂಗಡಿಯನ್ನು ಗೆಲ್ಲಿಸಿ ತಂದಿದ್ದೇನೆ

Spread the love

ಬೆಳಗಾವಿ- ಇತ್ತೀಚಿಗೆ ನಡೆದ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಸ್ವಂತ ತಮ್ಮ ಸತೀಶ್ ಜಾರಕಿಹೊಳಿ ಅವರನ್ನು ಸೋಲಿಸಿ,ಲಿಂಗಾಯತ ಸಮುದಾಯದ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರನ್ನು ಗೆಲ್ಲಿಸಿದ್ದು ನಾನೇ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಠ ಅವರ ಪರವಾಗಿ ಮತಯಾಚಿಸಿದ ಅವರು ಪಕ್ಷದ ವಿಚಾರ ಬಂದಾಗ ನಾನೆಂದಿಗೂ ಕುಟುಂಬ ನೋಡಿಲ್ಲ,ನನಗೆ ಪಕ್ಷದ ಗೆಲುವೇ ಮುಖ್ಯವಾಗಿದ್ದು,ನಾನು ಬಸವ ತತ್ವದ ಪರಿಪಾಲಕನಾಗಿದ್ದೇನೆ.ನಾನೆಂದಿಗೂ ಜಾತಿವಾದ ಮಾಡಿದವನಲ್ಲ. ಕೆಲವರು ಸೋಲೀನ ಬೀತಿಯಿಂದ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಠ ಅವರನ್ನು ಗೆಲ್ಲಿಸುವದು,ಕಾಂಗ್ರೆಸ್ ಪಕ್ಷವನ್ನು ಸೋಲೀಸುವದೇ ನನ್ನ ಗುರಿ ಎಂದು ರಮೇಶ್ ಜಾರಕಿಹೊಳಿ ಹೇಳಿದ್ರು.

ಮಹಾಂತೇಶ್ ಕವಟಗಿಮಠ ಅವರು ಪ್ರತಿಷ್ಠಿತ ಲಿಂಗಾಯತ ಸಂಸ್ಥೆಯ ನಿರ್ದೇಶಕರಾಗಿದ್ದಾರೆ,ಸಮಾಜ ಅವರ ಪರವಾಗಿ ನಿಲ್ಲಬೇಕು,ಯಾವುದೇ ವದಂತಿಗಳಿಗೆ ಕಿವಿಗೊಡದೇ ಮಹತೇಶ್ ಕವಟಗಿಮಠ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿಕೊಂಡ ಅವರು,ನಾನು ಶೀಘ್ರದಲ್ಲೇ ದೆಹಲಿಗೆ ಹೋಗುತ್ತಿದ್ದೇನೆ.ಬಿಜೆಪಿ ವರಿಷ್ಠರನ್ನು ಭೇಟಿಯಾದ ಬಳಿಕ ಮತ್ತೆ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ರು…

ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ ಮಾತನಾಡಿ,ರಮೇಶ್ ಜಾರಕಿಹೊಳಿ ಹಿರೇಬಾಗೇವಾಡಿ ಗ್ರಾಮಕ್ಕೆ ನೀರು ಹರಿಸಿದ ಭಗೀರಥ,ಹಿರೇಬಾಗೇವಾಡಿ ಗ್ರಾಮಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ತಂದ ಸಾಧಕ,ನನ್ನಂತಹ ಲಿಂಗಾಯತ ನಾಯಕನನ್ನು ಡಿಸಿಸಿ ಬ್ಯಾಂಕಿಗೆ ಅವಿರೋಧವಾಗಿ ಆಯ್ಕೆ ಮಾಡಿದ ಜಾತ್ಯಾತೀತ ನಾಯಕ ರಮೇಶ್ ಜಾರಕಿಹೊಳಿ ಅವರಾಗಿದ್ದಾರೆ ಎಂದರು.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ