Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮತ್ತೆ ಕೊರೊನಾ ಸೋಂಕು ಹೆಚ್ಚುತಿದೆ. ಶಾಲಾ-ಕಾಲೇಜುಗಳಲ್ಲಿ ಹಾಗೂ ಧಾರವಾಡ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಅಲ್ಲದೇ ಹೊಸ ರೂಪಾಂತರ ವೈರಸ್ ಬಗ್ಗೆಯೂ ಎಚ್ಚರಿಕೆ ವಹಿಸುವ ಅಗತ್ಯವಿದೆ ಈ ಹಿನ್ನೆಲೆಯಲ್ಲಿ ಸಂಜೆ 4 ಗಂಟೆಗೆ 7 ಜಿಲ್ಲೆಗಳ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಗುವುದು ಎಂದರು.

ಬೆಂಗಳೂರು ನಗರ, ಧಾರವಾಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಸಭೆ ಬಳಿಕ ಕೈಗಳ್ಳಲಾಗುವ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಕೋವಿಡ್ ನಿಯಂತ್ರಣಕ್ಕೆ ತಡ ಮಾಡದೇ ಎಲ್ಲಾ ರೀತಿಯ ಮುಂಜಾಗೃತಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಾಕಿ ಇರುವ ಕಡತಗಳ ಶೀಘ್ರ ವಿಲೇವಾರಿಗೆ ಕ್ರಮ:
ಸರ್ಕಾರದಲ್ಲಿ 2 ವರ್ಷದಿಂದ ಕಡತಗಳು ವಿಲೇವಾರಿಯಾಗದೇ ಬಾಕಿ ಇರುವ ಬಗ್ಗೆ ಉತ್ತರಿಸುತ್ತಾ, ಕೆಲವು ಇಲಾಖೆಗಳಲ್ಲಿ ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳಿಂದ ಕಡತಗಳು ನಿರ್ಣಯವಾಗದೇ ಉಳಿದಿದೆ. ಇದಕ್ಕಿರುವ ಕಾನೂನು ಹಾಗೂ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ. ಈ ಬಗ್ಗೆ ಕಾನೂನು ಸಚಿವರ ಅಭಿಪ್ರಾಯವನ್ನೂ ಪಡೆದು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ