Breaking News

ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ.: ರಮೇಶ್ ಜಾರಕಿಹೊಳಿ‌

Spread the love

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇ ಒಳ್ಳೆಯದಾಯ್ತು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ‌ ಅಚ್ಚರಿಯ ಹೇಳಿಕೆ ನೀಡಿದರು.

ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾನೇ ನಿಲ್ಲಿಸಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ. ಲಖನ್ ಜಾರಕಿಹೊಳಿ ನಿಂತಿದ್ದೇ ಒಳ್ಳೆಯದಾಯ್ತು, ಇಲ್ಲವಾದರೆ ಅವಿರೋಧ ಆಯ್ಕೆ ಆಗುತ್ತಿತ್ತು. ಲಖನ್ ಜಾರಕಿಹೊಳಿ ಧೈರ್ಯ ಮಾಡದಿದ್ರೆ ಪರಿಸ್ಥಿತಿ ಬೇರೆ ಇರುತ್ತಿತ್ತು ಎಂದು ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.


Spread the love

About Laxminews 24x7

Check Also

ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

Spread the loveಬೆಳಗಾವಿ : ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಮಾ.13ರಿಂದ 15ರವರೆಗೆ 16ನೇ ಸರಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ