Breaking News

ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

Spread the love

ಬೆಳಗಾವಿ:  ಕೋವಿಡ್ ನಿರ್ವಹಣೆಯಲ್ಲಿ ವಿಫಲ   ಸೇರಿದಂತೆ ರೈತರಿಗೆ ಹಾಗೂ ಕೃಷಿ ಕೂಲಿಕಾರರಿಗೆ ಮಾರಕವಾಗಿರುವ ಭೂ ಸುಧಾರಣಾ, ಎಪಿಎಂಸಿ,  ಕಾರ್ಮಿಕ  ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಗುರುವಾರ  ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮೂಲಕ   ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಕಾಂಗ್ರೆಸ್  ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಉಳುವವಣೆ ಭೂ ಒಡೆಯ ಎಂಬ ಕಾಯ್ದೆಯನ್ನು  ತಿದ್ದುಪಡಿಗೊಳಿಸಿ ರೈತರ ಜಮೀನನ್ನು ಶ್ರೀಮಂತ ಪಾಲು ಮಾಡಲು  ಬಿಜೆಪಿ ಸರ್ಕಾರ ಮುಂದಾಗಿದೆ. ಇದು ರೈತರಿಗೆ ಮಾರಕವಾಗಿವೆ.   ಕೊರೊನಾ  ಹೆಸರಲ್ಲಿ ರಾಜ್ಯ ಸರ್ಕಾರ ಹಗಲು ದರೋಡೆ ನಡೆಸುತ್ತಿದೆ. ವೈದ್ಯಕೀಯ ಪರಿಕರ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ನಡೆಸಿದರು. ರಾಜ್ಯಪಾಲರು ಮಧ್ಯ ಪ್ರವೇಶಿಸಿ ಈ ಸಂಬಂಧ ಸೂಕ್ತ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ರೈತರಿಂದ ದಲ್ಲಾಳಿಗಳನ್ನು ದೂರವಿಡಬೇಕು ಎಂಬ ಎಪಿಎಂಸಿ ಕಾಯ್ದೆಯ ಮೂಲಕ ಉದ್ದೇಶವಾಗಿದೆ. ಆದ್ರೆ ಸರ್ಕಾರ ಇದನ್ನು ತಿದ್ದುಪಡಿ ಮಾಡುವ ಮೂಲಕ  ರೈತರನ್ನು ದಲ್ಲಾಳಿಗಳಿಗೆ ಬಲಿ ಮಾಡಲು ಹೋರಟಿದೆ ಎಂದು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ  ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಮಾಜಿ ನಗರ ಸೇವಕಿ ಜಯಶ್ರೀ ಮಾಳಗಿ, ಎಸ್ಟಿ ಘಟಕದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಾಳೇಶ ದಾಸನಟ್ಟಿ,  ಕಾರ್ಯಕರ್ತರಾದ  ಆಯೇಶಾ ಸನದಿ, ಮಂಜುನಾಥ ಕಾಂಬಳೆ, ಬೆಳಗಾವಿ ಗ್ರಾಮೀಣ ಹಾಗೂ ನಗರ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ