Breaking News
Home / ಜಿಲ್ಲೆ / ಬೆಳಗಾವಿ / ಕೋವಿಡ್ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ,ಕೊಗನೊಳ್ಳಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಭೇಟಿ

ಕೋವಿಡ್ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ,ಕೊಗನೊಳ್ಳಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಭೇಟಿ

Spread the love

ಬೆಳಗಾವಿ: ಕೋವಿಡ್ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ರಾಜ್ಯದ ಗಡಿಭಾಗದಲ್ಲಿರುವ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಗೆ ಭಾನುವಾರ (ನ.28) ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಸರಕಾರದ ಮಾರ್ಗಸೂಚಿ ಪ್ರಕಾರ ನೆರೆಯ ಮಹಾರಾಷ್ಟ್ರ ರಾಜ್ಯದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಪೂರ್ವ ಅವಧಿಯ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಆದ್ದರಿಂದ ನೆಗೆಟಿವ್ ವರದಿ ಹೊಂದಿದವರನ್ನು ಮಾತ್ರ ರಾಜ್ಯದೊಳಗೆ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗಡಿಭಾಗದಲ್ಲಿರುವ ಚೆಕ್ ಪೋಸ್ಟ್ ಮೂಲಕ ಸಾಗುವ ಪ್ರತಿಯೊಂದು ವಾಹನವನ್ನು ತಡೆದು ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರ್ತವ್ಯ ನಿರತ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆಯನ್ನು ನೀಡಿದರು.

ಇದೇ ಸಂದರ್ಭದಲ್ಲಿ ಕೆಲವು ವಾಹನಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಇಲ್ಲದಿರುವುದರಿಂದ ವಾಪಸ್ ಕಳುಹಿಸಿದರು.


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ