Breaking News

ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ರೆಸಿಡೆಂಟ್ ಡಾಕ್ಟರ್ಸ್ ಇಂದು ‘OPD’ ಬಂದ್​ಗೆ ಕರೆ

Spread the love

ಬೆಂಗಳೂರು: ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ರೆಸಿಡೆಂಟ್ ಡಾಕ್ಟರ್ಸ್ ಇಂದು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ನಡೆಸಲಿದ್ದಾವೆ.

ವೈದ್ಯರಿಗೆ ಏಪ್ರಿಲ್ ತಿಂಗಳಿನಿಂದ ತಿಂಗಳಿಗೆ 10,000 ಕೋವಿಡ್ ಭತ್ಯೆ ಘೋಷಿಸಲಾಗಿತ್ತು.

ಆದರೆ ಈ ಬಗ್ಗೆ ಇನ್ನೂ ರಾಜ್ಯ ಸರ್ಕಾರ ತೀರ್ಮಾನವನ್ನು ಕೈಗೊಂಡಿಲ್ಲ, ಇದಲ್ಲದೇ ಕೋವಿಡ್ ಅಪಾಯ ಭತ್ಯೆಗೆ ತಕ್ಷಣವೇ ಹಣವನ್ನು ಮಂಜೂರು ಮಾಡಬೇಕು ಹಾಗೂ ಸ್ನಾತಕೋತ್ತರ ಪದವೀಧರರು ಮತ್ತು ಇಂಟರ್ನ್‌ಗಳಿಗೆ ಸಕಾಲದಲ್ಲಿ ಸ್ಟೈ ಫಂಡ್ ಪಾವತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದಲ್ಲದೇ 018-19ರ ಶೈಕ್ಷಣಿಕ ವರ್ಷದ ಪ್ರಕಾರ, ಶೈಕ್ಷಣಿಕ ಶುಲ್ಕವನ್ನು ಪುನಾರಚಿಸಬೇಕು. ಶೈಕ್ಷಣಿಕ ಶುಲ್ಕವನ್ನು ₹30,000 ದಿಂದ ₹1,20,000ಕ್ಕೆ ಏರಿಸಲಾಯಿತು. ಇದು ಸುಮಾರು ಶೇ.40ರಷ್ಟು ಹೆಚ್ಚಳವಾಗಿದೆ

ಇನ್ನೂ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ರೆಸಿಡೆಂಟ್ ಡಾಕ್ಟರ್ಸ್ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳುತ್ತಿರುವುದಾಗಿ ಪ್ರಕಟಣೆ ಹೊರಡಿಸಿದ್ದಾರೆ‌.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ