Breaking News

ಗೆಳೆಯರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ, ಹೊಡೆದಾಟಕ್ಕೆ ತಿರುಗಿ ಓರ್ವನ ಕೊಲೆ

Spread the love

ಬೆಳಗಾವಿ – ಇಲ್ಲಿಯ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ, ಹೊಡೆದಾಟಕ್ಕೆ ತಿರುಗಿ ಓರ್ವನ ಕೊಲೆಯಾಗಿದೆ.

ಭಾನುವಾರ ರಾತ್ರಿ 10.30ರ ಹೊತ್ತಿಗೆ ಘಟನೆ ನಡೆದಿದೆ.

ಗೆಳಯರಿಬ್ಬರು ಸೇರಿ ಸಾರಾಯಿ ಕುಡಿದು ಬರುವಾಗ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಾಡ್ ನಿಂದ ಓರ್ವ ಇನ್ನೋರ್ವನ ತಲೆಗೆ ಹೊಡೆದಿದ್ದು, ಆತ ಅಲ್ಲಿಯೆ ಕುಸಿದು ಬಿದ್ದಿದ್ದಾನೆ. ನಂತರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಬದುಕುಳಿಯಲಿಲ್ಲ.

ಸಾವಿಗೀಡಾದವನ ಹೆಸರು ಸೂರಜ್ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ಬರಬೇಕಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ