Breaking News

ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ

Spread the love

ದಾವಣಗೆರೆ, ಆ.20- ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ ಕೂಲಿನಾಲಿ ಮಾಡಿ ತಮ್ಮನನ್ನು ಸಾಕಿ ಸಲಹುತ್ತಿದ್ದರೂ ನೆತ್ತಿಯ ಮೇಲೊಂದು ಸೂರಿಲ್ಲದೆ ಪರಿತಪಿಸುತ್ತಿದ್ದಾರೆ.

ಜಗಳೂರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಗ್ರಾಮವೊಂದರ ಮಳೆ ಸೋರುವ ಹಾಳು ಮನೆಯಲ್ಲಿ ವಾಸಿಸುತ್ತಿರುವ ಮೇಘನಾ ಭವಿಷ್ಯದಲ್ಲಿ ಸಾಧನೆ ಮಾಡುವ ಹಂಬಲ ಹೊಂದಿದ್ದಾಳೆ.

ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಮೇಘನಾ ಭವಿಷ್ಯದಲ್ಲಿ ಬ್ಯಾಂಕ್ ಅಕಾರಿಯಾಗುವ ಕನಸು ಕಂಡಿದ್ದಾಳೆ.

ತನ್ನ ಓದಿನ ಜತೆಗೆ ಕೂಲಿನಾಲಿ ಮಾಡಿ ಜೀವನ ಸಾಗಿಸುತ್ತಿರುವುದಲ್ಲದೆ ಎಸ್‍ಎಸ್‍ಎಲ್‍ಸಿ ಓದುತ್ತಿರುವ ತನ್ನ ಸಹೋದರನಿಗೂ ನೆಲೆ ಕಲ್ಪಿಸಿಕೊಡುವ ಹೊಣೆ ಮೇಘನಾ ಮೇಲಿದೆ.

ತಂದೆ-ತಾಯಿ ಇಲ್ಲದೆ ತಬ್ಬಲಿಯಾಗಿರುವ ಈ ಮಕ್ಕಳಿಗೆ ಅಗತ್ಯ ವಸತಿ ವ್ಯವಸ್ಥೆ ಮಾಡಿಕೊಡಬೇಕು ಎಂದು ಎಐಎಸ್‍ಎಫ್ ರಾಜ್ಯ ಮಹಿಳಾ ಘಟಕ ಒತ್ತಾಯಿಸಿದೆ.

ಜನರ ಒಡನಾಡಿ ಜಿಲ್ಲಾಕಾರಿಯಾಗಿರುವ ರಮೇಶ್ ಬಿಳಗಿ ಅವರು ಕೂಡಲೇ ಈ ತಬ್ಬಲಿಗಳಿಗೆ ವಸತಿ ವ್ಯವಸ್ಥೆ ಮಾಡಿಕೊಡುವಂತೆ ಜಗಳೂರಿನ ಪಟ್ಟಣ ಪಂಚಾಯತ್ ಅಕಾರಿಗೆ ಆದೇಶ ನೀಡಬೇಕು ಎಂದು ಘಟಕದ ಉಪಾಧ್ಯಕ್ಷೆ ವೀಣಾನಾಯಕ್, ಜಿಲ್ಲಾ ಕಾರ್ಯದರ್ಶಿ ತಿಪ್ಪೇಸ್ವಾಮಿ ಹಾಗೂ ಸಹಕಾರ್ಯದರ್ಶಿ ಜ್ಯೋತಿ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚೆಗಷ್ಟೆ ಮೇಘನಾ ತಂದೆ-ತಾಯಿ ಕ್ಷಯ ರೋಗದಿಂದ ಮೃತಪಟ್ಟಿದ್ದು, ಯಾರ ಆಸರೆಯೂ ಇಲ್ಲದೆ ಸ್ವಾಭಿಮಾನದ ಜೀವನ ನಡೆಸಲು ಮುಂದಾಗಿರುವ ಮೇಘನಾಳಿಗೆ ವಸತಿ ಆಸರೆ ನೀಡಬೇಕಿರುವುದು ಜಿಲ್ಲಾಡಳಿತದ ಕರ್ತವ್ಯ.

ಈ ಅನಾಥೆ ವಿದ್ಯಾರ್ಥಿನಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ಜಿಲ್ಲಾಕಾರಿಗಳು ಮೀನಾಮೇಷ ಎಣಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘಟನೆಯ ಪದಾಕಾರಿಗಳು ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ