Breaking News

ಅಪ್ಪಾಸಾಬ್ ಮಕಾನಿ ಎಂಬುವರ ಮೇಲೆ ಹೆಸ್ಕಾಂ ಎಇಇ ಹಾಗೂ ಅವರ ಸಿಬ್ಬಂದಿ ಹಲ್ಲೆ ಮಾಡಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

Spread the love

ಚಿಕ್ಕೋಡಿ : ವಿದ್ಯುತ್ ಬಿಲ್ ಕಟ್ಟಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗ್ರಾಹಕನಿಗೆ ಹೆಸ್ಕಾಂ ಎಇಇ ಅಧಿಕಾರಿಯೊಬ್ಬರು ಕಸಗುಡಿಸುವ ಪೊರಕೆಯಿಂದ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಿರಡಿ ಗ್ರಾಮದಲ್ಲಿ ನಡೆದಿದೆ. ಅಪ್ಪಾಸಾಬ್ ಮಕಾನಿ ಎಂಬುವರ ಮೇಲೆ ಹೆಸ್ಕಾಂ ಎಇಇ ಹಾಗೂ ಅವರ ಸಿಬ್ಬಂದಿ ಹಲ್ಲೆ ಮಾಡಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಬಿರಡಿ ಗ್ರಾಮದ ಅಪ್ಪಾಸಾಬ್ ಎಂಬಾತ ಕಳೆದ 1 ವರ್ಷದಿಂದ ವಿದ್ಯುತ್ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡಿದ್ದಾನೆ. ಹೀಗಾಗಿ, ಸಿಬ್ಬಂದಿ ಜತೆಗೆ ಆಗಮಿಸಿದ ಹೆಸ್ಕಾಂ ಅಧಿಕಾರಿಗಳು, ಬಿಲ್ ಕಟ್ಟುವಂತೆ ಸೂಚಿಸಿದ್ದಾರೆ. ಈ ಸಮಯದಲ್ಲಿ ಗ್ರಾಹಕ ಅಪ್ಪಾಸಾಬ್​ ಮತ್ತು‌ ಹೆಸ್ಕಾಂ ಸಿಬ್ಬಂದಿ ನಡುವೆ ವಾಗ್ಯುದ್ಧ ನಡೆದಿದೆ.

ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಗ್ರಾಹಕನ ಮೇಲೆ ಹೆಸ್ಕಾಂ ಎಇಇ ಮತ್ತವರ ಸಿಬ್ಬಂದಿ ಪೊರಕೆಯಿಂದ ಮನ ಬಂದಂತೆ ಥಳಿಸಿದ್ದಾರೆ. ಈ ವೇಳೆ ಕುಟುಂಬಸ್ಥರು ಅಪ್ಪಾಸಾಬ್​ನನ್ನು ಮನೆಯ ಒಳಗೆ ಕರೆದುಕೊಂಡು ಹೋದರೂ ಬಿಡದ ಅಧಿಕಾರಿ ಮತ್ತು ಹೆಸ್ಕಾಂ ಸಿಬ್ಬಂದಿ, ಮನೆಯ ಬಾಗಿಲನ್ನು ಕಾಲಿನಿಂದ ಒದ್ದು ಮುರಿಯಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬಳಿಕ ಸ್ಥಳದಲ್ಲಿದ್ದ ಜನರು ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ. ಅಧಿಕಾರಿ ಮತ್ತು ಸಿಬ್ಬಂದಿಯ ಈ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ತಪ್ಪಿತಸ್ಥರನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ