Breaking News

ಲಾಕ್ ಡೌನ್, ಶಾಲಾ, ಕಾಲೇಜು ಮುಚ್ಚುವ ಕುರಿತು ಸಿಎ ಹೇಳಿದ್ದೇನು?

Spread the love

ದಾವಣಗೆರೆ : ಸರ್ಕಾರದ ಮುಂದೆ ಲಾಕ್ ಡೌನ್ ಕುರಿತು ಯಾವುದೇ ಪ್ರಸ್ತಾವನೆ ಇಲ್ಲ. ಶಾಲಾ -ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತು ಜನತೆ ಭಯಪಡದೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

 

ರೂಪಾಂತರಿ ವೈರಸ್ ಕಂಡು ಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಲಾಗಿದೆ. ಅವರ ಸಂಪರ್ಕಿತರ ಪತ್ತೆ ಹಚ್ಚಿ ಪರೀಕ್ಷಿಸಲಾಗುತ್ತಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿಯೂ ಕಟ್ಟುನಿಟ್ಟಿನ ಪರೀಕ್ಷೆ ಮಾಡುತ್ತಿದ್ದು, ನೆಗಟಿವ್ ಇದ್ದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಕೇರಳದಿಂದ ಆಗಮಿಸಿರುವ ವಿದ್ಯಾರ್ಥಿಗಳು ಆಗಮಿಸುವವರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

ಸರ್ಕಾರ ನಿರಂತರವಾಗಿ ತಜ್ಞರು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದೆ. ಕಾಲಕಾಲಕ್ಕೆ ಅವರು ನೀಡುವ ನಿರ್ದೇಶನದಂತೆ ಕ್ರಮ ವಹಿಸಲಾಗುವುದು, ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ ವ್ಯಕ್ತಿಗೆ ವಿಭಿನ್ನ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಾಗಿ ಐ.ಸಿ.ಎಂ.ಆರ್ ಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಯಾವ ತಳಿ ಎಂದು ತಿಳಿಯಲಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಗೋಮಾಳದಲ್ಲಿ ಅವೈಜ್ಞಾನಿಕ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಯತ್ನ: ವಿರೋಧಿಸಿ ತಹಶಿಲ್ದಾರ್ ಕಚೇರಿಗೆ ಕುರಿ ನುಗ್ಗಿಸಿ ಪ್ರತಿಭಟನೆ

Spread the loveದಾವಣಗೆರೆ: ಗೋಮಾಳ‌ ಜಾಗವನ್ನು ಸರ್ಕಾರಿ ಕಟ್ಟಡ ನಿರ್ಮಾಣ ಮಾಡಲು ಮಂಜೂರು ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ