ಬೆಂಗಳೂರು: ರಾಜಧಾನಿಯ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಮತ್ತು ಮೊಬೈಲ್, ಗಾಂಜಾ, ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ದಾಳಿ ಇನ್ನೂ ಮುಂದುವರೆದಿದೆ.
