Breaking News

ಣ್ಣೆ ಪಾರ್ಟಿಗೆಂದು ಆಹ್ವಾನಿಸಿ ಸ್ನೇಹಿತನನ್ನೇ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Spread the love

ಬೆಳಗಾವಿ : ಎಣ್ಣೆ ಪಾರ್ಟಿಗೆಂದು ಆಹ್ವಾನಿಸಿ ಸ್ನೇಹಿತನನ್ನೇ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಡಗಾವಿಯ ಸೂರಜ್ ಗೊಂದವಾಡ್ಕರ್ (23) ಕೊಲೆಯಾದ ದುರ್ದೈವಿ.

ಮನೆಯಲ್ಲಿದ್ದ ಸೂರಜ್​ಗೆ ಫೋನ್ ಮಾಡಿರುವ ದುಷ್ಕರ್ಮಿಗಳು, ಎಣ್ಣೆ ಪಾರ್ಟಿಗೆ ಆಹ್ವಾನಿಸಿದ್ದಾರೆ. ನಂತರ ಹಳೆ ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ಸ್ನೇಹಿತರೆಲ್ಲರೂ ಪಾರ್ಟಿ ಮಾಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದೆ. ಬಳಿಕ ಸೂರಜ್​ಗೆ ರಾಡ್​ನಿಂದ ಹೊಡೆದು ಹತ್ಯೆಗೈದಿರುವ ದುಷ್ಕರ್ಮಿಗಳು, ರಸ್ತೆ ಪಕ್ಕ ಶವ ಎಸೆದು ಪರಾರಿಯಾಗಿದ್ದಾರೆ.

ಸೂರಜ್ ಹತ್ಯೆಗೆ ಆತನ ಸ್ನೇಹಿತರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ