Breaking News

ಮುಂದಿನ ಎರಡು ತಿಂಗಳ ಕಾಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳಿಗೆ ಬ್ರೇಕ್ 1d

Spread the love

ಬೆಂಗಳೂರು: ಶಾಲಾ, ಕಾಲೇಜು ಮತ್ತು ಹಾಸ್ಟಲ್‍ಗಳಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂದಿನ ಎರಡು ತಿಂಗಳ ಕಾಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಎಲ್ಲಾ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಮುಂದೂಡಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶಿಸಿದೆ.ಶಿಕ್ಷಣ ಸಂಸ್ಥೆಗಳಲ್ಲಿ ಸಮ್ಮೇಳನಗಳು, ಸೆಮಿನಾರ್ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ಮುಂದೂಡಬೇಕು

ಕನಿಷ್ಠ ಭೌತಿಕ ಹಾಜರಾತಿಯೊಂದಿಗೆ ಕಾರ್ಯಕ್ರಮವನ್ನು ನಡೆಸಬಹುದು.

ಇಲ್ಲವೇ ಹೆಚ್ಚು ಭಾಗವಹಿಸಬೇಕಾದ ಸಂಧರ್ಭದಲ್ಲಿ ವರ್ಚುವಲ್ ಮೋಡï ಮೂಲಕ ಹಾಜರಾಗಬಹುದು ಎಂದು ಸೂಚಿಸಿದೆ.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಆದ್ಯತೆಯ ಮೇಲೆ ಲಸಿಕೆಯನ್ನು ನೀಡಲಾಗಿದೆಯೆ ಎಂದು ಖಚಿತ ಪಡಿಸಿಕೊಳ್ಳಲು ಮತ್ತು ಲಸಿಕೆ ಪಡೆಯದವರಿಗೆ ಕೂಡಲೆ ಲಸಿಕೆ ಪಡೆದು ಹಾಜರಾಗಲು ಅವಕಾಶ ನೀಡುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.

ಕ್ಯಾಂಪಸ್‍ಗಳಲ್ಲಿ ಕೋವಿಡ್-19ಬಗ್ಗೆ ಸೂಕ್ತ ಕಾಳಜಿ ವಹಿಸಬೇಕು. ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳನ್ನು ಪ್ರತಿದಿನ ಪರೀಕ್ಷಿಸಬೇಕು ಎಂದು ಸಲಹೆ ನೀಡಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಸರ್ಕಾರ ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್

Spread the love ಕಾಂಗ್ರೆಸ್ ಸರ್ಕಾರ ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ : ಮಾಜಿ ಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ