Breaking News

ಬೆಳಗಾವಿಯಲ್ಲೂ ಇಬ್ಬರು ದಂತ ವೈದ್ಯಕೀಯ ವಿದ್ಯಾರ್ಥಿನಿಯರಿಗೆ ವಕ್ಕರಿಸಿದ ಕೊರೊನಾ

Spread the love

ಬೆಳಗಾವಿ: ಇಲ್ಲಿನ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಸೋಂಕಿಗೆ ಒಳಗಾದ ಇಬ್ಬರೂ ವಿದ್ಯಾರ್ಥಿನಿಯರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಇವರು ನಗರದ ಖಾಸಗಿ ದಂತ ವೈದ್ಯಕೀಯ ಮಹಾವಿದ್ಯಾಲಯದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿನ ವಸತಿ ನಿಲಯದಲ್ಲಿರುವ ಈ ಇಬ್ಬರು ಸ್ವಯಂ ಪ್ರೇರಿತವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.

ಇಬ್ಬರಲ್ಲೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಒಂದೂ ಪ್ರಕರಣ ದಾಖಲಾಗಿರಲಿಲ್ಲ.‌ ಇದೀಗ ಎರಡು ಪ್ರಕರಣಗಳು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿವೆ.

ಇತ್ತೀಚೆಗೆ ಧಾರವಾಡದ ಎಸ್​ಡಿಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಚಾಮರಾಜನಗರ ಮೆಡಿಕಲ್​ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಸೋಂಕಿತರೆಲ್ಲ ಕ್ವಾರಂಟೈನ್​ನಲ್ಲಿದ್ದು, ಅವರ ಗಂಟಲು ದ್ರವದ ಮಾದರಿಯನ್ನು ಲ್ಯಾಬ್​ಗೆ ಕಳಿಸಲಾಗಿದೆ.


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ