Breaking News
Home / ರಾಜಕೀಯ / ಈಸಿ ಲೋನ್, ಈಸಿ ಇನ್ ಸ್ಟಾಲ್ ಮೆಂಟ್ ಎಂದು ಲೋನ್ ಕೊಡುವ ರೀತಿಯಲ್ಲಿ ಪಕ್ಷೇತರ ಅಭ್ಯರ್ಥಿ  ಪ್ರಚಾರ ಮಾಡುತ್ತಾರೆ.: ಸತೀಶ ಜಾರಕಿಹೊಳಿ

ಈಸಿ ಲೋನ್, ಈಸಿ ಇನ್ ಸ್ಟಾಲ್ ಮೆಂಟ್ ಎಂದು ಲೋನ್ ಕೊಡುವ ರೀತಿಯಲ್ಲಿ ಪಕ್ಷೇತರ ಅಭ್ಯರ್ಥಿ  ಪ್ರಚಾರ ಮಾಡುತ್ತಾರೆ.: ಸತೀಶ ಜಾರಕಿಹೊಳಿ

Spread the love

ಬೆಳಗಾವಿ:  ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಗುರಿ ಇಟ್ಟುಕೊಂಡಿದ್ದೇವೆ ಎಂದರು.
ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆಯಿಂದ ಮತವಿಭಜನೆ ಪ್ರಶ್ನೆಯೇ ಇಲ್ಲ. ವಿವೇಕರಾವ್ ಈಗಾಗಲೇ ರಮೇಶ ಜಾರಕಿಹೊಳಿ ಜೊತೆಗೆ ಗುರುತಿಸಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜಿಲ್ಲೆಯಲ್ಲೇ ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯವನ್ನೇ ಕೈಗೊಂಡಿಲ್ಲ. ಅವರು ನಾಪತ್ತೆಯಾಗಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಲಖನ್ ಅವರನ್ನು ಕಣದಿಂದ ಹಿಂದೆ ಸರಿಸುವ ಪ್ರಯತ್ನವನ್ನೂ ಮಾಡಲಿಲ್ಲ.
೧೩ ಶಾಸಕರ ಪೈಕಿ ಇಬ್ಬರು ಬಂಡಾಯ ಅಭ್ಯರ್ಥಿಪರವಾಗಿದ್ದಾರೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್ ನಂ. ೧ ಸ್ಥಾನದಲ್ಲಿದೆ. ಆದರೆ, ಬಿಜೆಪಿ ಇನ್ನೂ ಪ್ರಚಾರ ಕಾರ್ಯವನ್ನೇ ಆರಂಭಿಸಿಲ್ಲ. ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರೊಬ್ಬರೇ ಜಿಲ್ಲೆಯಾದ್ಯಂತ ಸಂಚರಿಸಿ, ಮತಯಾಚನೆ ಮಾಡುತ್ತಿದ್ದಾರೆ. ಒಂದೇ ಮತ ಚಲಾಯಿಸುವಂತೆ ಹೇಳಿಕೆ ನೀಡುತ್ತಿರುವ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರಿಗೆ ಕ್ಷೇತ್ರದ ಪರಿಚಯವೇ ಇಲ್ಲ. ಲಖನ್ ಬಿಜೆಪಿ ಬಂಡಾಯ ಅಭ್ಯರ್ಥಿ. ಬಿಜೆಪಿ ಬಿ ಟೀಮ್ ಅವರ ಪರ ಪ್ರಚಾರ ಮಾಡುತ್ತಿರುವವರು, ಬಿಜೆಪಿ ಪಕ್ಷದ ಸಮಾರಂಭಗಳಲ್ಲಿ ಬಿಜೆಪಿ ಅಭ್ಯರ್ಥಿಪರವಾಗಿ ಮತಯಾಚಿಸುತ್ತಿಲ್ಲ. ಜಾತ್ರೆಗಳಂತಹ ವೇದಿಕೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ.
ಕಳೆದ ಬಾರಿ ನಮ್ಮನ್ನು ಹೇಗೆ ಸೋಲಿಸಿದ್ದಾರೆ ಎಂಬುದು ಗೊತ್ತಿದೆ. ಕಾಂಗ್ರೆಸ್‌ನವರು ಈ ಬಾರಿ ಗಟ್ಟಿಯಾಗಿದ್ದೇವೆ. ನಮ್ಮ ಮತದಾರರು ನಮ್ಮೊಂದಿಗೆ ಗಟ್ಟಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್ಚಿನ ಮತಗಳ ಅಂತರದಿಂದ ಗೆಲುವುವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಇಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಪ್ರತಿಯೊಬ್ಬ ನಾಯಕರು, ಕಾರ್ಯಕರ್ತರ ಕರ್ತವ್ಯವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಯಾರನ್ನೂ ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ. ನಮ್ಮ ಯಾವುದೇ ಗೊಂದಲವೂ ಇಲ್ಲ. ಬಿಜೆಪಿಯಲ್ಲೇ ಗೊಂದಲ ವಾತಾವರಣ ಉಂಟಾಗಿದೆ ಎಂದು ಹೇಳಿದರು.

ನಮ್ಮಲ್ಲಿ ಗೊಂದಲವಿಲ್ಲ. ಮೊದಲ ರೌಂಡ್ ನಲ್ಲೇ ನಾವು ಗೆಲ್ಲುತ್ತೇವೆ. ಉಳಿದ 4500 ಮತದಲ್ಲಿ ಅವರಿಬ್ಬರು ಹೊಡೆದಾಡುತ್ತಿದ್ದಾರೆ. ನಮಗೆ ಏನೂ ಸಮಸ್ಯೆ ಇಲ್ಲ ಎಂದು ಅವರು ತಿಳಿಸಿದರು.

ಈಸಿ ಲೋನ್, ಈಸಿ ಇನ್ ಸ್ಟಾಲ್ ಮೆಂಟ್ ಎಂದು ಲೋನ್ ಕೊಡುವ ರೀತಿಯಲ್ಲಿ ಪಕ್ಷೇತರ ಅಭ್ಯರ್ಥಿ  ಪ್ರಚಾರ ಮಾಡುತ್ತಾರೆ. ಆದರೆ ಲೋನ್ ತುಂಬದವರ ಗಾಡಿ ಎತ್ಕೊಂಡು ಹೋಗೋ ರೀತಿಯಲ್ಲಿ ಚುನಾವಣೆ ಆದ ನಂತರ ಗಾಡಿ ತಗೊಂಡು ಹೋಗ್ತಾರೆ, ಹುಷಾರಾಗಿರಿ ಎಂದು ತಿಳಿಸಿ ಹೇಳುತ್ತಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ’ : ನಿರ್ಮಲಾ ಸೀತಾರಾಮನ್ ಘೋಷಣೆ

Spread the loveನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಖರ್ಚು ಮಾಡಲು ಹಣವಿಲ್ಲದ ಕಾರಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಣಕಾಸು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ