ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗಾಗಿ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಡಿ. 31 ರವರೆಗೆ ವಿಸ್ತರಿಸಿದೆ.
ಈ ಮೊದಲು ಅರ್ಜಿ ಸಲ್ಲಿಸಲು ನ.30 ವರೆಗೆ ಕೊನೆಯ ದಿನಾಂಕವಾಗಿತ್ತು.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡ ಕಾರಣ ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.31 ರವರೆಗೆ ವಿಸ್ತರಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿಯನ್ನು sevasindhu.karnataka.nic.in ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿ ದೂರವಾಣಿ ಸಂಖ್ಯೆ: 08192-250022 ಅನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.