Breaking News

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ : ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

Spread the love

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗಾಗಿ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಡಿ. 31 ರವರೆಗೆ ವಿಸ್ತರಿಸಿದೆ.

ಈ ಮೊದಲು ಅರ್ಜಿ ಸಲ್ಲಿಸಲು ನ.30 ವರೆಗೆ ಕೊನೆಯ ದಿನಾಂಕವಾಗಿತ್ತು.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡ ಕಾರಣ ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.31 ರವರೆಗೆ ವಿಸ್ತರಿಸಲಾಗಿದೆ.

 

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿಯನ್ನು sevasindhu.karnataka.nic.in ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿ ದೂರವಾಣಿ ಸಂಖ್ಯೆ: 08192-250022 ಅನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ