Breaking News
Home / ಹುಬ್ಬಳ್ಳಿ / ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ, ನಾಳೆ ದೆಹಲಿಗೆ: ಸಿಎಂ ಬೊಮ್ಮಾಯಿ

ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ, ನಾಳೆ ದೆಹಲಿಗೆ: ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ: ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ವಿಶೇಷವಾಗಿ ಗಡಿಭಾಗಗಳಲ್ಲಿ ಕಠಿಣ ನಿಯಮ ತರುವ ಅನಿವಾರ್ಯತೆಯಿದೆ.ನಾಳೆ ದೆಹಲಿಗೆ ಹೋಗುತ್ತಿದ್ದು ಅಲ್ಲಿ ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ನಿಯಮ ಜಾರಿಗೆ ತರಲಾಗುವುದು.

ಎಂದು ಹೇಳುವ ಮೂಲಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ತರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರೋಗ್ಯ ಇಲಾಖೆ ಮತ್ತು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ವೈಜ್ಞಾನಿಕ ಪ್ರಗತಿ ಮತ್ತು ಕೇಂದ್ರ ಸರ್ಕಾರದ ಅನಿಸಿಕೆ, ಶಿಫಾಸಲು ಏನಿದೆ ಎಂದು ಚರ್ಚೆ ಮಾಡುತ್ತೇನೆ ಎಂದರು.

ಲಾಕ್ ಡೌನ್ ಇಲ್ಲ: ಕೋವಿಡ್ ಒಂದನೇ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿ ಈಗಾಗಲೇ ಜನಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಎರಡನೇ ಅಲೆ ತಗ್ಗಿದ ನಂತರ ಜನಜೀವನ ಸಹಜ ಸ್ಥಿತಿಗೆ ಬರುತ್ತಿರುವ ಸಂದರ್ಭದಲ್ಲಿ ಮತ್ತೆ ಲಾಕ್ ಡೌನ್ ಹೇರಿಕೆ ಮಾಡಿದರೆ ಕಷ್ಟವಾಗುತ್ತದೆ. ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ, ಲಾಕ್ ಡೌನ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಈಗಿರುವ ಸೋಂಕಿನ ತೀವ್ರತೆಯನ್ನು ತಿಳಿದುಕೊಂಡು ಏನೇನು ಮಾರ್ಗಸೂಚಿ ಮತ್ತು ನಿಯಮ ಹೇರಬೇಕೆಂದು ಚಿಂತಿಸಲಾಗುವುದು. ಯಾರೂ ಗಾಬರಿಗೊಳಗಾಗುವುದು ಬೇಡ ಎಂದರು.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ