Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​

ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​

Spread the love

ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್​​ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ.

ಹೊಸ ಬಸ್​​ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್​​ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದರು.

ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಅಥಣಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭರದಿಂದ ಪ್ರಚಾರ ಕೈಗೊಂಡು ಮತ ಯಾಚಿಸಿದರು. ಇದೇ ಸಂದರ್ಭದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದರು.

ಹಳೆ ಬಸ್​​ಗಳು ಪ್ರತಿನಿತ್ಯ ಇರುವುದರಿಂದ ಹಾನಗಲ್ ಉಪಚುನಾವಣೆ ಫಲಿತಾಂಶ ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬರುತ್ತೆ. ಇದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೊದಲ ಪ್ರಾಶಸ್ತ್ಯ ಸ್ಥಾನದಿಂದ ಆಯ್ಕೆ ಆಗುತ್ತಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ವಿಶ್ವಾಸ ವ್ಯಕ್ತಪಡಿಸಿದರು.

ನೆರೆ ಸಂತ್ರಸ್ತರ ವಿಚಾರ, ಬೆಲೆಯೇರಿಕೆ, ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್, ಕೊರೊನಾ ಸಂದರ್ಭದಲ್ಲಿ ಸರ್ಕಾರ ನಡುವಳಿಕೆಯಿಂದ ಜನಸಾಮಾನ್ಯರಿಗೆ ಅರ್ಥವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸುತ್ತಾರೆ ಎಂದರು.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ