Breaking News
Home / ರಾಜಕೀಯ / ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ: ಸಾಲ, ಸಹಾಯಧನ ಇತ್ಯಾದಿ (ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ)

ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ: ಸಾಲ, ಸಹಾಯಧನ ಇತ್ಯಾದಿ (ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ)

Spread the love

ಬೆಳಗಾವಿ : ವಿವಿಧ ಯೋಜನೆಗಳಲ್ಲಿ ಸಾಲ ನೀಡಲು, ಸಹಾಯಧನ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಇಲ್ಲೇ ಲಿಂಕ್ ಗಳನ್ನು ನೀಲಾಗಿದ್ದು ನೇರವಾಗಿ ಅರ್ಜಿ ಸಲ್ಲಿಸಲು, ವಿವರ ಮಾಹಿತ ಪಡೆಯಲು ಅವಕಾಶವಿದೆ.

ಅಗತ್ಯವಾದವರು ಸುದ್ದಿಯಲ್ಲಿರುವ ಲಿಂಕ್ ಕ್ಲಿಕ್ ಮಾಡಿ

 

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಗಾಗಿ ಅರ್ಜಿ ಆಹ್ವಾನ

೨೦೨೧-೨೨ ನೇ ಸಾಲಿನ ಬೆಳಗಾವಿ ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿ ಕೇಂದ್ರಕ್ಕೆ ೨೪ ತಿಂಗಳ ತರಬೇತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ತೆಗೆದುಕೊಂಡಿರಬೇಕು ಅಭ್ಯರ್ಥಿಯು ಭಾರತೀಯ ನಾಗರಿಕರಾಗಿದ್ದು, ಕರ್ನಾಟಕದಲ್ಲಿ ಕನಿಷ್ಠ ೫ ವರ್ಷ ವಿದ್ಯಾಭ್ಯಾಸ ಮಾಡಿರಬೇಕು.

೩೦ ಅರ್ಹ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು.

ನಿಗದಿತ ಅರ್ಜಿಗಳನ್ನು  http://www.karhfw.gov.in  ವೆಬ್ ಸೈಟ್ ನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ (SIHFW) ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಾಲಯ ಬೆಳಗಾವಿ ಇಲ್ಲಿಗೆ ಡಿಸೆಂಬರ್ ೧೦ ಸಂಜೆ ೫.೩೦ ಗಂಟೆಯೊಳಗೆ ಸಲ್ಲಿಸಲು ತಿಳಿಸಲಾಗಿದೆ.

ಅರ್ಜಿ ಮತ್ತು ಇತರ ದಾಖಲೆಗಳನ್ನು ಒಳಗೊಂಡ ಲಕೋಟೆಯ ಮೇಲೆ “ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಕಿರಿಯ (ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.

ಹೆಚ್ಚಿನ ಮಾಹಿತಿಗಾಗಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು, ಬೆಂಗಳೂರು ದೂರವಾಣಿ ಸಂಖ್ಯೆ: ೦೮೦-೨೩೨೦೬೧೨೫/೬ ಗೆ, ಇಮೇಲ್  [email protected] ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಾಲಯ ಬೆಳಗಾವಿ, ದೂರವಾಣಿ ಸಂಖ್ಯೆ ೦೮೩೧-೨೪೮೨೭೪೦ ಗೆ ಸಂಪರ್ಕಿಸಬಹುದು ಎಂದು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

೨೦೨೧-೨೨ ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಜೈನ, ಕ್ರಿಶ್ಚಿಯನ್, ಬೌದ್ಧ, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆಗಳು:

ಶ್ರಮಶಕ್ತಿ ಯೋಜನೆ:
ಅಲ್ಪಸಂಖ್ಯಾತರ ಸಮುದಾಯದ ಸಾಂಪ್ರಾದಾಯಿಕ ಕುಶಲಕರ್ಮಿಗಳಿಗೆ ಮತ್ತು ಕುಲಕಸಬುದಾರರಿಗೆ ಅವರ ವೃತ್ತಿ ಕೌಶಲ್ಯವನ್ನು ಅಭಿವೃದ್ಧಿ ಪಡಿಸಿಕೊಳ್ಳಲು ಗರಿಷ್ಠ ರೂ.೫೦,೦೦೦ ವರೆಗೆ ಶೇ.೪% ರಷ್ಟು ಬಡ್ಡಿ ದರದಲ್ಲಿ ಸಾಲಸೌಲಭ್ಯ ಇದರಲ್ಲಿ ನಿಗದಿತ ಅವಧಿಯೊಳಗೆ ೩ ವರ್ಷಗಳ ಅವಧಿಯೊಳಗೆ ಸಾಲ ಮರುಪಾವತಿ ಮಾಡುವ ಅರ್ಜಿದಾರರಿಗೆ ಶೇ.೫೦% ರ ಬ್ಯಾಂಕನಿಂದ ಸಹಾಯಧನ ನೀಡಲಾಗುವುದು.

ಕಿರು (ಮೈಕ್ರೋ) ಸಾಲ ಮತ್ತು ಸಹಾಯಧನ ಯೋಜನೆ:
ಅಲ್ಪಸಂಖ್ಯಾತರ ಮಹಿಳೆಯರು ನಡೆಸುತ್ತಿರುವ ಲಾಭದಾಯಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮಹಿಳಾ ಸ್ವ-ಸಹಾಯಗಳ ಸಂಘಗಳಿಗೆ ಸಣ್ಣ ಪ್ರಮಾಣದ ವ್ಯಾಪಾರ ಹಾಗೂ ಇತರೆ ಚಟುವಟಿಕೆಗಳಿಗಾಗಿ ಪ್ರತಿ ಸದಸ್ಯರಿಗೆ ಶೇ.೪% ರ ಬಡ್ಡಿ ದರದಲ್ಲಿ ರೂ.೧೦,೦೦೦ ಸಾಲ ಸೌಲಭ್ಯ ಇದರಲ್ಲಿ ಶೇ.೫೦% ರಷ್ಟು ಸಹಾಯಧನ ನೀಡಲಾಗುವದು.

ಗಂಗಾ ಕಲ್ಯಾಣ ಯೋಜನೆ:
ಅಲ್ಪಸಂಖ್ಯಾತರರು ವೈಯಕ್ತಿಕ ಕೊಳವೆ ಬಾವಿ ಯೋಜನೆ ಸೌಲಭ್ಯ ಪಡೆಯಲು ಕನಿಷ್ಠ ೧ ಎಕರೆ ೨೦ ಗುಂಟೆಯಿಂದ ಗರಿಷ್ಠ ೫ ಎಕರೆ ಖುಷ್ಕಿ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ಅಲ್ಪಸಂಖ್ಯಾತರ ರೈತರಿಗೆ ರೂ.೨೫೦ ಲಕ್ಷಗಳ ಆರ್ಥಿಕ ನೆರವು (ಬಯಸಿದ್ದಲ್ಲಿ ರೂ.೫೦,೦೦೦ ಸಾಲ ಸೇರಿ) ಇದರಲ್ಲಿ ಕೊಳವೆ ಬಾವಿ ಕೊರೆಯುವಿಕೆ ಪಂಪ್/ ಮೋಟಾರ್ ಸರಬರಾಜು ಮತ್ತು ವಿದ್ಯುದೀಕರಣ ವೆಚ್ಚ ಸೇರಿರುತ್ತದೆ.

ಆಟೋ ರಿಕ್ಷಾ/ ಟ್ಯಾಕ್ಷಿ/ ಸರಕು ವಾಹನಗಳ ಖರೀದಿಗಾಗಿ ಸಹಾಯಧನ ಯೋಜನೆ:
ಆಟೋ ರಿಕ್ಷಾ/ ಟ್ಯಾಕ್ಷಿ/ ಸರಕು ವಾಹನಗಳ ಖರೀದಿಗಾಗಿ ರಾಷ್ಟ್ರೀಕೃತ ಬ್ಯಾಂಕ ಗಳಿಂದ ಪಡೆಯುವ ಸಾಲಕ್ಕೆ ನಿಗಮದಿಂದ ರೂ.೭೫೦೦೦ ಸಾವಿರಗಳ ಸಹಾಯಧನ ಸಾಲಭ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೈಕ್ರೋ ವೈಯಕ್ತಿಕ (ಕೊವೀಡ್-೧೯) ಸಾಲದ ಯೋಜನೆ:
ಮೈಕ್ರೋ ವೈಯಕ್ತಿಕ ಸಾಲದ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿ ನಿಗಮದಿಂದ ರೂ.೮೦೦೦ ಸಾಲ ಹಾಗೂ ರೂ.೨೦೦೦ ಸಹಾಯಧನ ಸೇರಿದಂತೆ ಒಟ್ಟು ರೂ.೧೦,೦೦೦ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಗುವುದು ಎಂದು ತಿಳಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ವೆಬ್‌ಸೈಟ್ https://kdmconline.karnataka.gov.in/ ಆನ್‌ಲೈನ್ ಮೂಲಕ ಡಿಸೆಂಬರ್ ೧೫ ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ, ಕೆ.ಎಸ್.ಸಿ.ಎ ಕ್ರಿಕೇಟ್ ಕ್ರೀಡಾಂಗಣ ಎದುರಗಡೆ, ರಾಮತೀರ್ಥ ನಗರ, ಬೆಳಗಾವಿ-೫೯೦೦೦೧೬ ಹಾಗೂ ದೂರವಾಣಿ ಸಂಖ್ಯೆ: ೦೮೩೧-೨೯೫೦೭೯೪ ಗೆ ಸಂಪರ್ಕಿಸಬಹುದು ಎಂದು ಬೆಳಗಾವಿಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಜಿಲ್ಲಾ ವ್ಯವ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

CET/Neet ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

೨೦೨೧-೨೨ ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ  CET/NEET ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ, ಕ್ರಿಶ್ಚಿಯನ್, ಬೌದ್ಧ, ಸಿಖ್ಖರು, ಪಾರ್ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ ೫ ಪ್ರಾರಂಭಿಕ ದಿನಾಂಕವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್  http://kmdconline.karnataka.gov.in  ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ, ಕೆ.ಎಸ್.ಸಿ.ಎ. ಕ್ರಿಕೇಟ್ ಕ್ರೀಡಾಂಗಣ ಎದುರುಗಡೆ, ರಾಮತೀರ್ಥ ನಗರ, ಬೆಳಗಾವಿ- ೫೯೦೦೧೬ ಅಥವಾ ದೂರವಾಣಿ ಸಂಖ್ಯೆ: ೦೮೩೧-೨೯೫೦೭೯೪ ಬೆಳಗಾವಿ ಕಚೇರಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಬೆಳಗಾವಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಸಾಲ ಸೌಲಭ್ಯ ಪಡೆಯಲು ಉಪ್ಪಾರ ಸಮಾಜದಿಂದ ಅರ್ಜಿ ಆಹ್ವಾನ

 

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಬೆಳಗಾವಿ ೨೦೨೧-೨೨ ನೇ ಸಾಲಿನ ಕ್ರಿಯಾ ಯೋಜನೆಯನ್ವಯ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಹ ಉಪ್ಪಾರ ಸಮಾಜಕ್ಕೆ ಸೇರಿದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಡಿಸೆಂಬರ್ ೧೦ ರ ಒಳಗಾಗಿ ಸಂಜೆ ೫.೩೦ ಗಂಟೆ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು:

ಉಪ್ಪಾರ ಸಮುದಾಯದ ಪ್ರವರ್ಗ-೧ ರ ೫೩ (ಚಿ) ಯಿಂದ ೫೩(೫) ವರೆಗಿನ ಉಪ್ಪಾರ, ಬೆಲ್ದರ್, ಚುನಾರ್, ಗಾವಾಡಿ, ಗೌಂದಿ, ಕಲ್ಲು ಕುಟಿಗ ಉಪ್ಪಾರ, ಲೋನಾರಿ, ಮೇಲು ಸಕ್ಕರೆಯವರು, ನಾಮದ ಉಪ್ಪಾರ, ಪಂಡಿತ್/ಪಡ್ತಿ ಸೇರಿದಂತೆ ಇತರ ಜಾತಿಗೆ ಸೇರಿರಬೇಕು.

ಅರ್ಹ ಜಾತಿ ಮತ್ತು ಪ್ರಮಾಣ ಪತ್ರ ಪಡೆದಿರಬೇಕು, ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.

ಅರ್ಜಿದಾರರು ಆಧಾರ ಕಾರ್ಡ್ ಹೊಂದಿದ್ದು, ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರಕ್ಕೆ ರೂ.೯೮,೦೦೦/- ಗಳು ಮತ್ತು ನಗರ ಪ್ರದೇಶದವರಿಗೆ ರೂ.೧,೨೦,೦೦/- ಗಳ ಮೀತಿ ಒಳಗಿರಬೇಕು, ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿಬೇಕು.

ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಪಡೆಯಬಹುದು, ಈಗಾಗಲೇ ಬೇರೆ ಯಾವುದೇ ನಿಗಮಗಳ ಯೋಜನೆಗಳಲ್ಲಿ ಸಾಲ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಹಾಗೂ ಅವರ ಕುಟುಂಬದವರಿಗೆ ಸಾಲ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.

ಸುವಿಧ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು:

ಈಗಾಗಲೇ ಕಳೆದ ಸಾಲುಗಳಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ ಪಡೆದ ಉಪ್ಪಾರ ಮತ್ತು ಸಮುದಾಯದ ವಿದ್ಯಾರ್ಥಿಗಳು ಸುವಿಧ ತಂತ್ರಾಂಶದ ಮೂಲಕ  http://suvidha.karnataka.gov.in ಈ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿದಾರರು ಆಧಾರ ಕಾರ್ಡ್ ಮತ್ತು ಚಾಲ್ತಿಯಲ್ಲಿರುವ. ಜಾತಿ ಆದಾಯ ಪ್ರಮಾಣ ಪತ್ರ ಹೊಂದಿರಬೇಕು.

ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಬೇಕಾದ ದಾಖಲೆಗಳು :

ಕಳೆದ ವರ್ಷದ ಅಂಕ ಪಟ್ಟಿ, ಪ್ರಸ್ತುತ ಸಾಲಿನ ವ್ಯಾಸಂಗ ಪ್ರಮಾಣ ಪತ್ರ, ಸಾಲ ಮಂಜೂರಾತಿ ಆದೇಶ, ಹಣ ಸಂದಾಯ ರಶೀದಿ, ಪೋಷಕರ ಒಪ್ಪಿಗೆ ಪತ್ರ ಜಾಮೀನುದಾರರ ಒಪ್ಪಿಗೆ ಪತ್ರ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ ೦೮೩೧-೨೪೦೨೧೬೩ ಗೆ ಅಥವಾ  http://uppardevelopment.karnataka.gov.in ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಉಪ್ಪಾರ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವಕರ್ಮ ಸಮುದಾಯದ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿಶ್ವಕರ್ಮ ಸಮುದಾಯದ ಹಾಗೂ ಉಪಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ೨೦೨೧-೨೨ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (೨,೩,೪,೫ ನೇ ಕಂತುಗಳು) ಸುವಿಧಾ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸುವಿಧಾ ತಂತ್ರಾಂಶದ ಮುಖಾಂತರ (Online) ಅರ್ಜಿ ಸ್ವೀಕೃತಿ:

ಅರ್ಜಿದಾರರು ಆಧಾರ್ ಲಿಂಕ್ ಹೊಂದಿದ ಪ್ರಸ್ತುತ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹಾಗೂ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಸದರಿ ಅರ್ಜಿಗಳನ್ನು  https://suvidha.karnataka.gov.in ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಈ ಯೋಜನೆಗೆ ಸಂಬಂಧಿಸಿದಂತೆ, ಸಲ್ಲಿಸಬೇಕಾಗಿರುವ ದಾಖಲೆಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ನಿಗಮದ http://https : /kvcdcl.karnataka.gov.in ಜಾಲತಾಣದಲ್ಲಿ ಪಡೆಯಬಹುದು ಎಂದು ತಿಳಿಸಲಾಗಿದೆ.

ಹಸ್ತಚಾಲಿತವಾಗಿ (offline) ಅರ್ಜಿ ಸ್ವೀಕೃತಿ:

ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಈ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ವಾಸಿಸುತ್ತಿರುವ ಆಯಾ ಜಿಲ್ಲೆಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ತಾಲ್ಲೂಕಿನ ಹಾಗೂ ನಿಗಮದ ವೆಬ್‌ಸೈಟ್‌ನ್ನು ಸಂಪರ್ಕಿಸಿ ಅರ್ಜಿ ನಮೂನೆಗಳನ್ನು ಪಡೆದು ಅಗತ್ಯ ದಾಖಲಾತಿಗಳನ್ನು ಭರ್ತಿ ಮಾಡಿ ಜಿಲ್ಲಾ ಕಛೇರಿಗಳಿಗೆ ನೇರವಾಗಿ ಸಲ್ಲಿಸಬೇಕು.

ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ -೨ಎ ಬರುವ ವಿಶ್ವಕರ್ಮ ಜಾತಿ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೪೦,೦೦೦ ಹಾಗೂ ಪಟ್ಟಣ ಪ್ರದೇಶದವರಿಗೆ ರೂ ೫೫,೦೦೦ ಒಳಗಿರಬೇಕು.

ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಲಿಂಕ್ ಹೊಂದಿದ ಚಾಲ್ತಿ ಬ್ಯಾಂಕ್ ಖಾತೆ ಹೊಂದಿರಬೇಕು, ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ನೀಡಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅಭ್ಯರ್ಥಿಗಳು ನಿಗಮದ ವೆಬ್ ಸೈಟ್  http://www.kvcdcl.karnataka.gov.in ಸಂಪರ್ಕಿಸಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ ಜನವರಿ ೧೦, ೨೦೨೨ ರೊಳಗೆ ಸಲ್ಲಿಸಬೇಕು ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ನಿಗಮದ ಜಿಲ್ಲಾ ಕಛೇರಿ ಸಹಾಯವಾಣಿ ಸಂಖ್ಯೆ ೦೮೩೧-೨೪೦೨೧೬೩ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕಾಗಿ ಅಲೆಮಾರಿ ಅರೆಅಲೇಮಾರಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ ೨೦೨೧-೨೨ ನೇ ಸಾಲಿನ ಕ್ರಿಯಾ ಯೋಜನೆಯನ್ವಯ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸುವಿಧಾ ತಂತ್ರಾಂಶದ ಮೂಲಕ ಆನ್ ಲೈನ್ ಅರ್ಜಿ ಸ್ವೀಕೃತಿ:

ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ನವೀಕರಣ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ೨ ನೇ ಕಂತಿಗೆ ’ಸುವಿಧಾ ತಂತ್ರಾಂಶ’ದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಆಧಾರ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿದ್ದು, https://suvidha.karnataka.gov.in ವೆಬ್ ಸೈಟ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಸಲ್ಲಿಸಬೇಕಾಗಿರುವ ದಾಖಲೆಗಳ ಬಗ್ಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್ ಸೈಟ್ https://kaad.karnataka.gov.in ನಲ್ಲಿ ಮಾಹಿತಿ ಪಡೆಯಬಹುದು.

ನೇರವಾಗಿ ಅರ್ಜಿಗಳ ಸ್ವೀಕೃತಿ:

ಸ್ವಯಂ ಉದ್ಯೋಗ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಬಯಸುವ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರು ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸಹಾಯಧನದ ನೆರವು ನೀಡುವುದು.

ಈ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಘಟಕ ವೆಚ್ಚ ರೂ.೧,೦೦,೦೦೧/- ರಿಂದ ರೂ.೨,೦೦,೦೦೦/- ಗಳ ವರೆಗೆ ಶೇ.೧೫ ರಷ್ಟು ಕನಿಷ್ಠ ರೂ.೨೦,೦೦೦/- ಗಳು ಗರಿಷ್ಠ ರೂ.೩೦,೦೦೦/- ಗಳ ಸಹಾಯಧನ , ಉಳಿಕೆ ಶೇ.೮೫ ರಷ್ಟು ರೂ.೧,೭೦,೦೦೦/- ಗಳನ್ನು ವಾರ್ಷಿಕ ಶೇ.೪ ರ ಬಡ್ಡಿದರದಲ್ಲಿ ಸಾಲ ಪಡೆಯಬಹುದು.

ಗಂಗಾ ಕಲ್ಯಾಣ ಯೋಜನೆ:

ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್ ಸೆಟ್ ಉಪಕರಣಗಳನ್ನು ಸರಬುರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ.೨.೫೦ ಲಕ್ಷಗಳಲ್ಲಿ ರೂ.೨.೦೦ ಲಕ್ಷಗಳ ಸಹಾಯಧನ ಹಾಗೂ ರೂ.೫೦,೦೦೦/- ಗಳ ಶೇ.೪ ರ ಬಡ್ಡಿದರದಲ್ಲಿ ಸಾಲ, ಈ ಮೊತ್ತದಲ್ಲಿ ವಿದ್ಯುದ್ಧೀಕರಣಕ್ಕೆ ಪ್ರತಿ ಕೊಳವೆ ಬಾವಿಗೆ ರೂ.೫೦,೦೦೦/- ಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು.

ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ:

ಅರ್ಜಿದಾರರು ಕೈಗೊಳ್ಳುವ ವ್ಯಾಪಾರ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳು, ಸೇವಾ ಉದ್ದಿಮೆಗಳು, ತಾಂತ್ರಿಕ ಉದ್ದಿಮೆಗಳು ಮತ್ತು ಸಾರಿಗೆ ವಲಯದಲ್ಲಿ ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳನುಸಾರ ಗರಿಷ್ಠ ರೂ.೧೦.೦೦ ಲಕ್ಷಗಳವರೆಗೆ ಬ್ಯಾಂಕುಗಳಿಂದ ಸಾಲ ಪಡೆಯುವುದು. ಬ್ಯಾಂಕ್ ಮಂಜೂರು ಮಾಡುವ ಸಾಲದ ಮೊತ್ತದಲ್ಲಿ ಶೇ.೨೦ ರಷ್ಟು ಅಂದರೆ ಗರಿಷ್ಠ ೧.೦೦ ಲಕ್ಷ ರೂ.ಗಳನ್ನು ನಿಗಮದಿಂದ ಸಹಾಯಧನದ ಮೂಲಕ ಮಂಜೂರು ಮಾಡಲಾಗುವುದು.

ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ:

ಮಹಿಳೆಯರಿಗೆ ಸ್ವಯಂ ಕೈಗೊಳ್ಳಲು ಸ್ವ ಸಹಾಯ ಗುಂಪುಗಳ ಮೂಲಕ ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಹಾಗೂ ಸಹಾಯಧನ ಒದಗಿಸಲಾಗುವುದು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿಲು ಅರ್ಹರಿರುವುದಿಲ್ಲ.ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ನಮೂನೆ ನಿಗಮದ ವೆಬ್ ಸೈಟ್ ನಲ್ಲಿ ಪಡೆಯಬಹುದು.

ಆಸಕ್ತರು ನಿಗಮದ ಜಿಲ್ಲಾ ಕಚೇರಿಯನ್ನು ಹಾಗೂ ನಿಗಮದ ವೆಬ್ ಸೈಟ್ https://kaad.karanataka.gov.in  ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ ೦೮೩೧-೨೪೨೧೬೩ ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ