Breaking News

ಚನ್ನರಾಜ್ ಹಟ್ಟಿಹೊಳಿ ಗೆಲುವು ನಿಶ್ಚಿತ: ಸತೀಶ್ ಜಾರಕಿಹೊಳಿ

Spread the love

ಬೈಲಹೊಂಗಲ: ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರ ಗೆಲುವು ಜಿಲ್ಲೆ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರುವಾರದಲ್ಲಿ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಗೆಲುವು ನಿಶ್ಚಿತ. ಆದರೆ ಬಹು ಮತಗಳ ಅಂತರದಿಂದ ಗೆಲ್ಲಬೇಕು. ಆದ್ದರಿಂದ ತಮ್ಮ ಮತವನ್ನು ಕಾಂಗ್ರೆಸ್ ಗೆ ನೀಡಿ ಎಂದು ಮನವಿ ಮಾಡಿದರು.

ಈ ವಿಧಾನಪರಿಷತ್ ಚುನಾವಣೆ ಗೆಲುವು ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಹೆಚ್ಚಿನ ಮತಗಳ ಅಂತರದ ಗೆಲುವು ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಬೇಕು. ಆಡಳಿತದಲ್ಲಿ ಇಲ್ಲದಿದ್ದರೂ ಹೆಚ್ಚು ಮತಗಳ ಅಂತರ ಗೆಲುವಿನಿಂದ ಬಿಜೆಪಿ ದಿಗ್ಭ್ರಮೆಗೊಳ್ಳಬೇಕು ಎಂದರು.

ಎರಡ್ಮೂರು ತಿಂಗಳಲ್ಲಿ ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆ ಕೂಡಾ ಬರಲಿವೆ. ಬಳಿಕ ಒಂದು ವರ್ಷ ಕಳದ್ರೆ ವಿಧಾನಸಭೆ ಚುನಾವಣೆ ಮತ್ತೆ ಬರಲಿದೆ. ಈ ಚುನಾವಣೆ ಗೆಲುವು ಮುಂಬರುವ ಚುನಾವಣೆಗೆ ಅನುಕೂಲವಾಗಲಿದೆ. ಆದ್ದರಿಂದ ನಾವೇಲ್ಲ ಒಂದಾಗಿ ಕೈ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ” ಎಂದು ತಿಳಿಸಿದರು. ಕಾಂಗ್ರೆಸ್ ಮುಖಂಡರಾದ ಬಾಬಾಸಾಹೇಬ್ ಪಾಟೀಲ, ಶಂಕರ ಗಿಡ್ಡನ್ನವರ, ಹಬೀಬ್ ಸಿಲ್ಲೆದಾರ್, ನಿಂಗಪ್ಪ, ಮುಖಂಡರು, ಕಾರ್ಯಕರ್ತರು ಇದ್ದರು.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ