Breaking News

ಎಸ್​ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಪತ್ತೆಯಾದ ಕೊರೊನಾ ಪ್ರಕರಣಗಳಲ್ಲಿ ಹೊಸ ಪ್ರಭೇದದ ವೈರಾಣು ಇಲ್ಲ: ಡಿಸಿ ಸ್ಪಷ್ಟನೆ

Spread the love

ಧಾರವಾಡ: ಇಲ್ಲಿನ ಸತ್ತೂರಿನಲ್ಲಿರುವ ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಬಾಕಿ ಇದ್ದ 140 ಜಿನೋಮ್ ಸಿಕ್ವೆನ್ಸಿಂಗ್ ವರದಿಗಳು ಲಭ್ಯವಾಗಿವೆ. ಇವುಗಳಲ್ಲಿ ಯಾವುದೇ ಹೊಸ ಪ್ರಭೇದದ ವೈರಾಣು ಕಂಡುಬಂದಿಲ್ಲ. ಹೀಗಾಗಿ, ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ್​​ ಹೇಳಿದ್ದಾರೆ.

ಎಸ್​ಡಿಎಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದ ಕೋವಿಡ್ ಪ್ರಕರಣಗಳ ಪ್ರಯೋಗಾಲಯ ಸ್ಯಾಂಪಲ್‌ಗಳನ್ನು ಜಿನೋಮ್ ಸಿಕ್ವೆನ್ಸಿಂಗ್‌ ಪತ್ತೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ನಿನ್ನೆ 113 ವರದಿಗಳ ಮಾಹಿತಿ ಸಿಕ್ಕಿತ್ತು. ಬಾಕಿ ಇದ್ದ 140 ವರದಿಗಳು ಇಂದು ದೊರೆತಿದ್ದು, ಇವುಗಳಲ್ಲಿ ಯಾವುದೇ ಹೊಸ ತಳಿಯ ವೈರಾಣು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಜನತೆ ಆತಂಕಕ್ಕೆ ಈಡಾಗುವ ಅಗತ್ಯವಿಲ್ಲ. ಆದರೆ, ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರದೇ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಕೋವಿಡ್ ನಿರೋಧಕ ಎರಡು ಡೋಸ್ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ