Breaking News

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ : ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ. ಮೊದಲು ತಮ್ಮ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಗೊಂದಲವಿದೆ. ರಮೇಶ್ ಜಾರಕಿಹೊಳಿ ಒಂದು ಲಖನ್ ಜಾರಕಿಹೊಳಿ ಅಥವಾ ಮಹಾಂತೇಶ ಕವಟಗಿಮಠ ಇಬ್ಬರಲ್ಲಿ ಒಬ್ಬರನ್ನು ಗೆಲ್ಲಿಸಬೇಕು. ಇಬ್ಬರನ್ನೂ ಗೆಲ್ಲಿಸುವ ಶಕ್ತಿ ಅವರಲ್ಲಿ ಇಲ್ಲವೆಂದರು.

ಲಖನ್ ಬಗ್ಗೆ ಬಹಳಷ್ಟು ಟೀಕೆ ಮಾಡಿದ್ದೇವೆ. ಅವರಿಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇಲ್ಲಿ ನಮ್ಮ ಪಕ್ಷ ಗೆಲ್ಲಬೇಕು. ಅದರಿಂದಲೇ ನಮಗೆ ಗೌರವ ಬರಲಿದೆ. ಲಖನ್ , ಬಿಜೆಪಿ ನಮ್ಮ ಪಕ್ಷದ ಎದುರಾಳಿಗಳೇ ಅವರ ವಿರುದ್ಧವೇ ಚುನಾವಣೆ ಮಾಡುತ್ತಿದ್ದೇವೆ. ಸಧ್ಯಕ್ಕೆ ಅವರು ಈ ಚುನಾವಣೆ ಮಾಡುವುದರಿಂದ ಸಂಬಂಧ ಜೋಡಿಸುವುದು ಸರಿಯಲ್ಲ ಎಂದರು.

ಬಿಜೆಪಿಯಲ್ಲಿಯೇ ಗೊಂದಲವಿದೆ. ಬಿಜೆಪಿ ಪಕ್ಷದ ಬ್ಯಾನರ್ ದಲ್ಲಿ ರಮೇಶ್ ಜಾರಕಿಹೊಳಿ ಕಾರ್ಯಕ್ರಮ ಮಾಡುತ್ತಾರೆ. ಅದೇ ವೇದಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ವೋಟ್ ಹಾಕಿ ಎನ್ನುತ್ತಾರೆ. ಮೊದಲು ಅದನ್ನು ಸರಿ ಮಾಡಿಕೊಳ್ಳಲು ಹೇಳಿ ಎನ್ನುವ ಮೂಲಕ ಎದುರಾಳಿಗಳಿಗೆ ತಿವಿದರು.

ಗ್ರಾಪಂ.ನಲ್ಲಿ ಕಾಂಗ್ರೆಸನವರೇ ಹೆಚ್ಚು ಗೆದ್ದಿದ್ದಾರೆ : ಸಾಮಾನ್ಯವಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಶಾಸಕರ ಕಂಟ್ರೋಲ್ ದಲ್ಲಿ ಇರಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಬಿಜೆಪಿ ಶಾಸಕರಿರುವುದರಿಂದ ನಿಮ್ಮ ಅಭ್ಯರ್ಥಿಯೇ ಗೆಲುವು ಪಡೆಯಲಿದ್ದಾರೇ ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬೆಳಗಾವಿಯಲ್ಲಿ ಬಿಜೆಪಿ ಶಾಸಕರು ಹೆಚ್ಚಿಗೆ ಇದ್ದರೂ ಕೂಡ, ಗ್ರಾಮ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಸದಸ್ಯರು ಹೆಚ್ಚಿದ್ದಾರೆಂದರು.

ನಿಪ್ಪಾಣಿಯಲ್ಲಿ ಹೆಚ್ಚಿನ ಸದಸ್ಯರು ಕಾಂಗ್ರೆಸ್ ನವರು ಇದ್ದಾರೆ. ರಾಯಬಾಗ, ಕುಡಚಿ, ಅಥಣಿಯಲ್ಲಿ ಕೂಡಾ ಇದ್ದಾರೆ. ಕಾಗವಾಡದಲ್ಲಿ ಮಾತ್ರ ಕಡಿಮೆ ಇದೆ. ಕ್ಷೇತ್ರದಲ್ಲಿ ಶಾಸಕರ ಸಂಖ್ಯೆ ಹೆಚ್ಚಿದ್ದರೂ ಸಹ ಗ್ರಾಮ ಪಂಚಾಯ್ತಿಯಲ್ಲಿ ಸದಸ್ಯರು ಕಾಂಗ್ರೆಸ್ ನವರು ಗೆದ್ದಿದ್ದಾರೆ. ಇದರಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನರನ್ನು ಒಂದಲ್ಲಾ ಒಂದು ರೀತಿ ಸೂಲಿಗೆ ಮಾಡುತ್ತಿದ್ದೆ ಎನ್ನುವ ರೀತಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಮಾಡಿ ಇಂಟರ್ನೆಟ್ ಬೆಲೆ ಜಾಸ್ತಿ ಮಾಡಿದೆ ಎಂದು ವಾಗ್ದಾಳಿ ಮಾಡಿದರು.

ಕಾಂಗ್ರೆಸ್ ಪಕ್ಷ ವಿವೇಕರಾವ್ ಪಾಟೀಲ ಬಿಟ್ಟು, ಚನ್ನರಾಜ್ ಹಟ್ಟಿಹೊಳಿ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಪಕ್ಷೇತರವಾಗಿ ಲಖನ್ ಸ್ಪರ್ಧೆ ಮಾಡಿಸಿದ್ದೇನೆ ಎಂಬ ರಮೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ವಿವೇಕರಾವ್ ಪಾಟೀಲ್ ಅವರ ಮೇಲೆ ಅಷ್ಟೊಂದು ಪ್ರೀತಿ ಇದ್ದಿದ್ದೇ ಆಗಿದ್ರೆ, ಲಖನ್ ಜಾಗದಲ್ಲಿ ವಿವೇಕರಾವ್ ಪಾಟೀಲ ನಿಲ್ಲಿಸಬೇಕಿತ್ತು. ಯಾಕೆ ಹಾಗೇ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಎರಡನೇ ಸುತ್ತಿನ ಪ್ರಚಾರ : ಈಗಾಗಲೇ ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಮೊದಲ ಸುತ್ತಿನ ಪ್ರಚಾರ ನಡೆಸಿದ್ದೇವೆ. ಮುಖಂಡರೊಂದಿಗೆ ಗ್ರಾಮ ಪಂಚಾಯ್ತಿ ಸದಸ್ಯರೊಂದಿಗೆ ಸಭೆ ನಡೆಸಿದ್ದೇವೆ. ಕಿತ್ತೂರು ಸೇರಿದಂತೆ ವಿವಿಧೆಡೆ ಎರಡನೇ ಸುತ್ತಿನ ಪ್ರಚಾರವನ್ನ ನಡೆಸಿದ್ದೇವೆ ಎಂದರು.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ