ರಾಷ್ಟ್ರೀಕೃತ ಅಥವಾ ಸಂಸ್ಥೆಯ ಬ್ಯಾಂಕುಗಳ ಭದ್ರತಾ ಸಿಬ್ಬಂದಿ, ಸೆಕ್ಯುರಿಟಿ ಏಜೆನ್ಸಿಗಳು, ಯಾವುದೇ ಸಂಸ್ಥೆಗಳಿಗೆ ಸೆಕ್ಯೂರಿಟಿ ಸೇವೆಗಳನ್ನು ನೀಡುವಗಾರ್ಡ್ ಗಳು, ಖಾಸಗಿ ಗನ್ ಮ್ಯಾನ್ ಗಳು ಚುನಾವಣೆ ಸಂದರ್ಭದಲ್ಲಿ ಶಸ್ತ್ರಾಸ್ತ್ರ ಜಮಾ ಮಾಡುವುದರಿಂದ ವಿನಾಯಿತಿ ಕೋರಿ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ.
ಇದರಿಂದ ವಿನಾಯಿತಿಕೋರುವವರು ನಿಗದಿತಅವಧಿಯಲ್ಲಿ ಶಸ್ತ್ರಾಸ್ತ್ರ ಸ್ಕ್ರೀನಿಂಗ್ ಸಮಿತಿ ಗೆ ಅರ್ಜಿ ಸಲ್ಲಿಸಬಹುದು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ ಅವರು ಜಿಲ್ಲಾಮಟ್ಟದ ಸ್ಕ್ರೀನಿಂಗ್ ಕಮಿಟಿಯ ಸದಸ್ಯ ಕಾರ್ಯದರ್ಶಿಗಳಾಗಿದ್ದು, ಇವರಿಗೆ ಆಯುಧ ಪರವಾನಿಗೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳಾದ ಆರ್. ವೆಂಕಟೇಶ್‍ಕುಮಾರ್ ಅವರು ತಿಳಿಸಿದ್ದಾರೆ.