ಬೆಂಗಳೂರು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನನ್ನು (Winter session in Belgavi) ನಡೆಸಲು ಸಿದ್ದತೆ ನಡೆಸಲಾಗಿದ್ದು, 2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಸುವರ್ಣಸೌಧಕ್ಕೆ ಪ್ರವೇಶ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಧಿವೇಶನ ಸಂಬಂಧಂದ ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತೆ ಎನ್ನುತ್ತಿದ್ದಾರೆ. ಆದರೆ ಒಮಿಕ್ರಾನ್ ಪರಿಣಾಮ ಮಾತ್ರ ಕಡಿಮೆ ಇದೆ. ಒಮಿಕ್ರಾನ್ ಸೋಂಕಿನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಮಿಕ್ರಾನ್ ಸೋಂಕಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ಮಾಹಿತಿ ಪಡೆಯಲಾಗುತ್ತಿದೆ ಎಂದರು.
ಇನ್ನು ಮೊದಲ ಕೊರನಾ ಪ್ರಕರಣಗಳಿಗೆ ಕ್ಲಸ್ಟರ್ ಎಂದು ಕರೆಯಲಾಗುತ್ತಿತ್ತು. ಈಗ 3 ಪ್ರಕರಣಗಳಿಗೆ ಕ್ಲಸ್ಟರ್ ಮಾಡಲಾಗುತ್ತಿದೆ. ಅಪಾರ್ಟ್ ಮೆಂಟ್ ಭೇಟಿಗೂ ಇನ್ಮುಂದೆ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Laxmi News 24×7