Breaking News
Home / ರಾಜಕೀಯ / ಮತದಾನ ಮಾಡುವ ವಿಧಾನ ಹಾಗೂ ಮತ ತಿರಸ್ಕೃತವಾಗಲು ಕಾರ

ಮತದಾನ ಮಾಡುವ ವಿಧಾನ ಹಾಗೂ ಮತ ತಿರಸ್ಕೃತವಾಗಲು ಕಾರ

Spread the love

ಬೆಳಗಾವಿ – ಡಿಸೆಂಬರ್ 10ರಂದು ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಆಯ್ಕೆಗೆ ಚುನಾವಣೆ ನಡೆಯಲಿದೆ.

ಈ ಚುನಾವಣೆಯಲ್ಲಿ ಮತದಾನ ಮಾಡುವ ವಿಧಾನ ಸಾಮಾನ್ಯ ಚುನಾವಣೆಗಿಂತ ಭಿನ್ನವಾಗಿದೆ. ಇಲ್ಲಿ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಲಿದೆ.

 

 

ಮತದಾನದ ವಿಧಾನ

1. ಮತ ಚಲಾಯಿಸುವ ಉದ್ದೇಶಕ್ಕಾಗಿ ಚುನಾವಣಾಧಿಕಾರಿಯು ಮತಪತ್ರದೊಡನೆ ನಿಮಗೆ ನೀಡುವ ನೇರಳೆ ಬಣ್ಣದ ಸೈಟ್ ಪೆನ್ನನ್ನು ಮಾತ್ರ ಬಳಸಿ ಮತ ಚಲಾಯಿಸಿ, ಬೇರೆ ಯಾವುದೇ, ಪೆನ್ನು ಪೆನ್ಸಿಲ್ಲು, ಬಾಲ್ ಪಾಯಿಂಟ್ ಪೆನ್ನನ್ನು ಅಥವಾ ಗುರುತು ಮಾಡುವ ಯಾವುದೇ ಇತರ ಸಾಧನವನ್ನು ಬಳಸಿ ಮತ ಚಲಾಯಿಸಿದರೆ, ನಿಮ್ಮ ಮತವನ್ನು ಅಸಿಂಧು ಎಂದು ಪರಿಗಣಿಸಲಾಗುವುದು.

2. ನಿಮ್ಮ ಮೊದಲನೇ ಪ್ರಾಶಸ್ತ್ರವಾಗಿ ನೀವು ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳುವಿರೋ, ಆ ಅಭ್ಯರ್ಥಿಯ ಹೆಸರಿನ ಮುಂದೆ ಒದಗಿಸಲಾಗಿರುವ ಪ್ರಾಶಸ್ತ್ಯ ಕ್ರಮ” ಎಂದು ಗುರುತು ಮಾಡಲಾಗಿರುವ ಅಂಕಣದಲ್ಲಿ ಅಂಕಿ *1* ನ್ನು ಗುರುತು ಹಾಕುವ ಮೂಲಕ ನಿಮ್ಮ ಮತ ನೀಡಿ. ಈ ಅಂಕಿ “1” ನ್ನು ಒಬ್ಬನೇ ಅಭ್ಯರ್ಥಿಯ ಹೆಸರಿನ ಮುಂದೆ ಮಾತ್ರ ಗುರುತು ಹಾಕಬೇಕು.

3, ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳನ್ನು ಚುನಾಯಿಸಬೇಕಿದ್ದ ಪಕ್ಷದಲ್ಲಿ ಸಹ ಅಂಕಿ “1” ನ್ನು ಕೇವಲ ಒಬ್ಬನೇ ಒಬ್ಬ ಅಭ್ಯರ್ಥಿಯ ಹೆಸರಿನ ಮುಂದೆ ಮಾತ್ರ ಗುರುತು ಹಾಕಬೇಕು.

4. ಚುನಾಯಿಸಬೇಕಾಗಿರುವ ಅಭ್ಯರ್ಥಿಗಳ ಸಂಖ್ಯೆ ಎಷ್ಟೇ ಇದ್ದರೂ, ಸ್ಪರ್ಧಿಸಿರುವ ಅಭ್ಯರ್ಥಿಗಳ ಸಂಖ್ಯೆಯಷ್ಟೇ ಪ್ರಾಶಸ್ತ್ರಗಳನ್ನು ನೀವ ಹೊಂದಿರುತ್ತೀರಿ, ಉದಾಹರಣೆಗೆ: ಚುನಾಯಿಸಬೇಕಾಗಿರುವ ಸ್ಥಾನ ಒಂದು ಅಥವಾ ಎರಡು ಆಗಿದ್ದು, ಐದು ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದಲ್ಲಿ, ನಿಮ್ಮ ಪ್ರಾಶಸ್ತ್ಯದ ಕ್ರಮದಲ್ಲಿ ಐದು ಪ್ರಾಶಸ್ತ್ರಗಳನ್ನು ಗುರುತು ಹಾಕಬಹದು.

5. ಉಳಿದ ಅಭ್ಯರ್ಥಿಗಳಿಗೆ ನಿಮ್ಮ ಮುಂದಿನ ಪ್ರಾಶಸ್ತ್ರಗಳನ್ನು ಗುರುತು ಹಾಕುವುದಕ್ಕಾಗಿ, ಅಂಥ ಅಭ್ಯರ್ಥಿಗಳ ಹೆಸರುಗಳ ಮುಂದೆ ಒದಗಿಸಲಾಗಿರುವ ಪ್ರಾಶಸ್ತ್ಯ ಕ್ರಮ” ಎಂಬ ಅಂಕಣದಲ್ಲಿ ತರುವಾಯದ ಅಂಕಿಗಳಾದ 2, 3, 4 ಇತ್ಯಾದಿಗಳನ್ನು ನಿಮ್ಮ ಪ್ರಾಶಸ್ತ್ಯ ಕ್ರಮದಲ್ಲಿ ಗುರುತು ಹಾಕುವ ಮೂಲಕ ನಿಮ್ಮ ಮತ ನೀಡಿ,

6. ಯಾರೇ ಒಬ್ಬ ಅಭ್ಯರ್ಥಿಯ ಹೆಸರಿನ ಮುಂದೆ ಕೇವಲ ಒಂದು ಅಂಕಿಯನ್ನು ಮಾತ್ರ ನೀವು ಗುರುತು ಹಾಕಿರುವುದನ್ನು ಖಚಿತಪಡಿಸಿಕೊಳ್ಳಿ ಮತ್ತು ಅದೇ ಅಂಕಿಯನ್ನು ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳ ಹೆಸರುಗಳ ಮುಂದೆ ಗುರುತು ಹಾಕಿರುವುದಿಲ್ಲ ಎಂಬುದನ್ನು ಸಹ ಖಚಿತಪಡಿಸಿಕೊಳ್ಳಿ.

7. ಪ್ರಾಶಸ್ತ್ಯ ವನ್ನು ಅಂಕಿಗಳ ಮೂಲಕ ಮಾತ್ರ ಎಂದರೆ 1, 2, 3, ಇತ್ಯಾದಿ ಕ್ರಮದಲ್ಲಿ ಮಾತ್ರ ಗುರತು ಹಾಕಬೇಕು. ಇದರ ಬದಲಾಗಿ ಒಂದು, ಎರಡು, ಮೂರು, ಇತ್ಯಾದಿ ಅಕ್ಷರಗಳ ರೂಪದಲ್ಲಿ ಬರೆಯಬಾರದು.

8. ಅಂಕಿಗಳನ್ನು ೧, ೨, ೩ ಅಥವಾ 1, 2, 3 ಇತ್ಯಾದಿ ಅಂತಾರಾಷ್ಟ್ರೀಯ ರೂಪದ ಭಾರತೀಯ ಅಂಕೆಗಳಲ್ಲಿ ಅಥವಾ , 11. 111 ಇತ್ಯಾದಿ ರೋಮನ್ ಅಂಕಿಗಳ ರೂಪದಲ್ಲಿ ಅಥವಾ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಮಾನ್ಯ ಮಾಡಲಾಗಿರುವ ಭಾರತದ ಯಾವುದೇ ಭಾಷೆಯಲ್ಲಿ ಬಳಸಲಾಗುವ ಅಂಕಿಗಳ ರೂಪದಲ್ಲಿ ಗುರುತು ಹಾಕಬಹುದಾಗಿದೆ

9. ಮತಪತ್ರದ ಮೇಲೆ ನಿಮ್ಮ ಹೆಸರು ಅಥವಾ ಯಾವುದೇ ಪದಗಳನ್ನು ಬರೆಯಬೇಡಿ ಮತ್ತು ನಿಮ್ಮ ಸಹಿ ಅಥವಾ ಇನಿಶಿಯಲ್ ಗಳನ್ನು ಹಾಕಬೇಡಿ, ಅಲ್ಲದೇ ನಿಮ್ಮ ಹೆಬ್ಬೆಟ್ಟಿನ ಗುರುತನ್ನು ಸಹ ಹಾಕಬೇಡಿ, ಹೀಗೆ ಮಾಡುವುದರಿಂದ ನಿಮ್ಮ ಮತಪತ್ರ ಅಸಿಂಧುವಾಗುತ್ತದೆ.

10. ನಿಮ್ಮ ಪ್ರಾಶಸ್ತ್ಯವನ್ನು ಸೂಚಿಸುವುದಕ್ಕಾಗಿ ನಿಮ್ಮ ಆಯ್ಕೆಯ ಅಭ್ಯರ್ಥಿಗಳ ಹೆಸರುಗಳ ಮುಂದೆ ಅಂಕಿಯನ್ನಲ್ಲದೆ ಇನ್ನಾವುದೇ ಚಿಹ್ನೆ ಅಥವಾ ಗುರುತನ್ನು ಹಾಕಬೇಡಿ, ಅಂಥ ಮತಪತ್ರವನ್ನು ತಿರಸ್ಕರಿಸಲಾಗುವುದು. ಆದ್ದರಿಂದ ನಿಮ್ಮ ಪ್ರಾಶಸ್ತ್ಯ ಗಳನ್ನು ಈ ಮೇಲೆ ವಿವರಿಸಿರುವಂತೆ 1,  2, 3 ಇತ್ಯಾದಿ ಮಾತ್ರ ಸೂಚಿಸಿ,

II. ನಿಮ್ಮ ಮತಪತ್ರವನ್ನು ಸಿಂಧು ಎಂದು ಪರಿಗಣಿಸುವುದಕ್ಕಾಗಿ ಅಭ್ಯರ್ಥಿಗಳ ಪೈಕಿ ಒಬ್ಬನೇ ಒಬ್ಬ ಅಭ್ಯರ್ಥಿಯ ಹೆಸರಿನ ಮುಂದೆ ಅಂಕಿ 1 ನ್ನು ಗುರುತು ಹಾಕುವ ಮೂಲಕ ನಿಮ್ಮ ಮೊದಲ ಪ್ರಾಶಸ್ತ್ಯ ವನ್ನು ಸೂಚಿಸುವುದು ಅವಶ್ಯಕವಾಗಿದೆ. ನೀವು ಎರಡನೆಯ ಅಥವಾ ತರುವಾಯದ ಪ್ರಾಶಸ್ತ್ರಗಳನ್ನು ಸೂಚಿಸಬಹುದಾಗಿದೆ ಅಥವಾ ಸೂಚಿಸದೇ ಇರಬಹುದಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ