Breaking News

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್​ ಫರ್ನಾಂಡಿಸ್‌ಗೆ ಸಂಕಷ್ಟ

Spread the love

ಮುಂಬೈ: ವಂಚಕ ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್​ ಫರ್ನಾಂಡಿಸ್‌ಗೆ ಸಂಕಷ್ಟ ಎದುರಾಗಿದೆ.

ಜಾರಿ ನಿರ್ದೇಶನಾಲಯ ಲುಕ್‌ ಔಟ್‌ ನೋಟಿಸ್‌​ ಹೊರಡಿಸಿದ್ದು ವಲಸೆ ವಿಭಾಗದ ಅಧಿಕಾರಿಗಳು ನಟಿಯನ್ನು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಕೆಳಗಿಳಿಸಿದರು.

ಮೂಲಗಳ ಪ್ರಕಾರ, ನಟಿ ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ನಿರ್ಗಮನ ಗೇಟ್ ಸಂಖ್ಯೆ 3ರ ಮೂಲಕ ಸಂಜೆ 5:30ಕ್ಕೆ ಮಸ್ಕತ್​ಗೆ ತೆರಳುತ್ತಿದ್ದರು. ಆದ್ರೆ ವಂಚನೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಭಾರತ ಬಿಟ್ಟು ತೊರೆಯಲು ಅನುಮತಿ ನೀಡಬಾರದು ಎಂಬ ನಿರ್ದೇಶನದೊಂದಿಗೆ ಲುಕ್‌ಔಟ್‌ ನೋಟಿಸ್‌ ನೀಡಲಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ