ಬಾಯ್ತಪ್ಪಿ ಮೋದಿ ಹೆಸರು : ದೇಶದಲ್ಲಿ ಸಾಲಮನ್ನಾ ಮಾಡಿದ್ದು ನರೇಂದ್ರ ಮೋದಿ ಎಂದು ತಪ್ಪಾಗಿ ಹೇಳಿದ ಸಿದ್ದರಾಮಯ್ಯನವರು ಬಳಿಕ ಕ್ಷಮೆ ಕೋರಿ ಮನಮೋಹನ್ ಸಿಂಗ್ ಸಾಲಮನ್ನಾ ಮಾಡಿದರು. ಐದು ರಾಜ್ಯಗಳಲ್ಲಿ ಸೋತ ಬಳಿಕ ಕೃಷಿ ಕಾಯ್ದೆ ವಾಪಸ್ ಪಡೆದುಕೊಂಡಿದ್ದಾರೆ. 700 ಜನ ರೈತರು ಸಾವನ್ನಪ್ಪಿದಕ್ಕೆ ಮಿಸ್ಟರ್ ಮೋದಿಯೇ ಕಾರಣ. ರೈತರ ಬಗ್ಗೆ ಇವರಿಗೆ ಕಾಳಜಿ ಇಲ್ಲ.
ರೈತರ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆ. ಇವರಿಗೆ ಮೂರು ಕಾಸಿನ ಮಾನ ಮರ್ಯಾದೆ ಇಲ್ಲ. ನಾನು ಕೊಟ್ಟ ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್, ಶಾದಿ ಭಾಗ್ಯ ನಿಲ್ಲಿಸಿದ್ದಾರೆ ಎಂದರು. ವಿವೇಕರಾವ್ ಪಾಟೀಲ್‌ಗೆ ಸಿದ್ದರಾಮಯ್ಯ ಟಿಕೆಟ್ ಕೊಡದೆ ಮೋಸ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳುತ್ತಿದ್ದಾರೆ. ನಮ್ಮ ಅಭ್ಯರ್ಥಿ ವಿರುದ್ಧ ವಿವೇಕರಾವ್ ಪಾಟೀಲ್ ಗೆಲ್ಲಿಸಿದ್ದರು.
ಗೆದ್ದ ಬಳಿಕ ವಿವೇಕರಾವ್ ನಮ್ಮ ಪಕ್ಷಕ್ಕೆ ಬರಲಿಲ್ಲ. ಪಕ್ಷಕ್ಕೆ ಬರದೆ ಇರುವವರಿಗೆ ಟಿಕೆಟ್ ಕೊಡಬೇಕಾ? ವಿವೇಕರಾವ್ ರಮೇಶ್ ಜಾರಕಿಹೊಳಿ ಫಾಲೋವರ್. ನಿಮಗೆ ಅಷ್ಟೊಂದು ಪ್ರೀತಿ ಇದ್ದಿದ್ದರೆ ತಮ್ಮನ ಬದಲು ವಿವೇಕರಾವ್ರನ್ನು ಚುನಾವಣೆಗೆ ನಿಲ್ಲಿಸಬೇಕಿತ್ತು. ಕಾಂಗ್ರೆಸ್‌ನಿಂದ ಕುರುಬ ಸಮುದಾಯದ ಮೂವರಿಗೆ ಟಿಕೆಟ್ ಕೊಟ್ಟಿದ್ದೇವೆ. ನೀವು ಎಷ್ಟು ಜನರಿಗೆ ಟಿಕೆಟ್ ಕೊಟ್ಟಿದೀರಿ. ನೀವು ಆಡಿದ್ದೆ ಆಟ ಎಂದುಕೊಂಡಿದ್ದೀರಾ ಎಂದು ಗುಡುಗಿದರು.
ಸಿದ್ಧಾಂತದ ಮೇಲೆ ರಾಜಕಾರಣ ಮಾಡಬೇಕು. ಸ್ವಾರ್ಥಕ್ಕಾಗಿ, ಹೆದರಿಸಿ ರಾಜಕಾರಣ ಮಾಡುವುದಲ್ಲ. ಸ್ವಾತಂತ್ರ್ಯಕ್ಕಾಗಿ ಬಿಜೆಪಿಯವರು ಒಬ್ಬರೂ ಮೃತರಾಗಿಲ್ಲ. ಆದರೆ, ನಮಗೆ ದೇಶ ಭಕ್ತಿ ಹೇಳಿ ಕೊಡುತ್ತಿದ್ದಾರೆ. ಮಹಾತ್ಮ ಗಾಂಧೀಜಿ ಕೊಂದವರು ಆರ್‌ಎಸ್‌ಎಸ್‌ನವರು. ನಾಥೂರಾಮ್ ಗೋಡ್ಸೆ ಆರ್‌ಎಸ್‌ಎಸ್‌ನವನು. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ಗೋಡ್ಸೆ ಪಳಿಯುಳಿಕೆ ಮತ್ತು ವಂಶಸ್ಥರು ಬಿಜೆಪಿಯಲ್ಲಿದ್ದಾರೆ.
ನರೇಂದ್ರ ಮೋದಿ ಆರ್‌ಎಸ್‌ಎಸ್‌ನವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್‌ಎಸ್‌ಎಸ್‌ನವರಲ್ಲ. ಬಿ.ಎಸ್. ಯಡಿಯೂರಪ್ಪ ಅವರನ್ನು ಕಿತ್ತು ಹಾಕಿದಾಗ ಲಾಟರಿ ಹೊಡೆದು ಮುಖ್ಯಮಂತ್ರಿ ಆಗಿ ಬಿಟ್ಟರು. ಅವರನ್ನೂ ಕಿತ್ತು ಹಾಕಲು ಈಶ್ವರಪ್ಪ ಮಾತನಾಡುತ್ತಿದ್ದಾನೆ ಎಂದು ಟೀಕಿಸಿದರು.
ಈ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿಯನ್ನು ಸೋಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲ್ಲಬೇಕೆಂದು ಕರೆ ಕೊಟ್ಟರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಎನ್.ಎ. ಹ್ಯಾರಿಸ್, ಮುಖಂಡರಾದ ಅಶೋಕ ಪಟ್ಟಣ, ವಿಶ್ವಾಸ ವೈದ್ಯ, ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ, ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.