ರಾಯಬಾಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಬೆಳಗಾವಿ ಮಾಜಿ ಶಾಸಕ ರಮೇಶ್ ಕುಡಚಿ ಮತ್ತೆ ಜೆಡಿಎಸ್ ನಿಂದ ಪಕ್ಷಾಂತರಗೊಂಡು ಕಾಂಗ್ರೆಸ್ ಸೇರಿದ್ದಾರೆ.
ಹೌದು, ಭಾನುವಾರ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಯಬಾಗದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಬೆಳಗಾವಿ ನಗರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಮೇಶ್ ಕುಡಚಿ ಪಕ್ಷಾಂತರ ಮಾಡಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದರು.
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಶಾಲು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಪ್ರಥಮ ಬಾರಿಗೆ ಬೆಳಗಾವಿ ಉತ್ತರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಂಇಎಸ್ ಸೋಲಿಸಿ ರಮೇಶ ಕುಡಚಿ ಸತತ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೂರನೇ ಅವಧಿಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಹತಾಶರಾಗಿ ಜನತಾ ದಳ (ಎಸ್ ) ಸೇರಿದರು. ಆದರೆ ಇದೀಗ ಮತ್ತೆ ಏಕಾಏಕಿ ಕಾಂಗ್ರೆಸ್ ಪಕ್ಷಕ್ಕೆ ಸೇರಿ ಸುದ್ದಿಯಾಗಿದ್ದಾರೆ.