ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದೆ.
ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಆತಂಕ ಹಾಗೂ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಎಲ್ಲೆಡೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಅಧಿವೇಶನಕ್ಕೆ ಪ್ರತ್ಯೇಕ ಗೈಡ್ ಲೈನ್ ಹೊರಡಿಸಲು ತೀರ್ಮಾನಿಸಿದೆ.
ಆರೋಗ್ಯ ಇಲಾಖೆ ಸಲಹೆ ಮೇರೆಗೆ ಅಧಿವೇಶಕ್ಕೆ ಹಾಜರಾಗುವವರಿಗೆ 2 ಡೋಸ್ ಲಸಿಕೆ ಕಡ್ಡಾಯ, ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಪ್ರಮುಖ ಅಂಶಗಳ ಬಗ್ಗೆ ಎರಡು ದಿನಗಳೊಳಗೆ ವಿಧಾನಸಭಾ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟವಾಗಲಿದೆ.
Laxmi News 24×7