Breaking News

ಅನಗತ್ಯ ವಿಳಂಬ ಬೇಡ: ಕೂಡಲಸಂಗಮ ಸ್ವಾಮೀಜಿ

Spread the love

ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ‘ಎ’ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾರ ಅನಗತ್ಯ ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

 

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಸಂಬಂಧ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ಬೆಳಗಾವಿ ಅಧಿವೇಶನದ ಒಳಗಾಗಿ ವರದಿ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಮೂರ್ತಿ ಸುಭಾಸ ಅಡಿ ನೇತೃತ್ವದ ತ್ರಿಸದಸ್ಯ ಸಮಿತಿ ನೇಮಕ ಮಾಡಿರುವುದು ಕಾನೂನು ಬದ್ಧವಲ್ಲ. ಈ ಸಮಿತಿಗೆ ಸಂವಿಧಾನದಲ್ಲಿ ಯಾವುದೇ ಮಾನ್ಯತೆ ಇಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನೀಡುವ ವರದಿಯೇ ಅಂತಿಮ ಎಂದು ಹೇಳಿದರು.

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಬಾಗಲಕೋಟೆ, ಬೆಳಗಾವಿ, ವಿಜಯಪುರದಲ್ಲಿ ಹೋರಾಟ ಸಮಿತಿಯ ಕಾರ್ಯಕಾರಣ ಸಭೆಯ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು.

ಪಂಚಮಸಾಲಿ ಸಮಾಜವನ್ನು ಒಡೆಯುವ ಶಕ್ತಿಗಳು ರಾಣಿ ಚನ್ನಮ್ಮ ಕಾಲದಿಂದಲೂ ಕಾರ್ಯನಿರತವಾಗಿವೆ. ಈ ಕುತಂತ್ರಕ್ಕೆ ಕಿವಿಗೊಡದೇ ನಿರಂತರ ಹೋರಾಟದ ಮೂಲಕ ಸಮಾಜ ಸಂಘಟನೆಯನ್ನು ಮತ್ತಷ್ಟು ಬಲಿಷ್ಠ ಮಾಡುತ್ತೇವೆ ಎಂದರು.

ಪಂಚಸೇನೆ ರಾಜ್ಯ ಘಟಕದ ಅಧ್ಯಕ್ಷ ಡಾ.ಬಸನಗೌಡ ಪಾಟೀಲ, ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್‌.ರುದ್ರಗೌಡ, ನಿಂಗನಗೌಡ ಸೋಲಾಪುರ, ಸಂಜು ಬಿರಾದಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.


Spread the love

About Laxminews 24x7

Check Also

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

Spread the loveಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ