ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ರಮೇಶ್, ಕತ್ತಿ, ಸವದಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಡಿಸೆಂಬರ್10ರಂದು ನಡೆಯಲಿರುವ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಬೆಳಗಾವಿ ತಾಲೂಕಿನಲ್ಲಿ ಖಾಸಗಿ ರೆಸಾರ್ಟ್‍ವೊಂದರಲ್ಲಿ ಸಭೆ ನಡೆಸಿದ್ದರು. ಈ ವೇಳೆ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು, ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿಯವರು ಎಲ್ಲರೊಂದಿಗೆ ಸಭೆ ನಡೆಸಿದರು. ಆದರೆ ಈ ವೇಳೆ ಮುಖ್ಯಮಂತ್ರಿಗಳು ಮಾಜಿ ಸಚಿವ ರಮೇಶ ಜಾರಕಿಹೊಳಿ, ಸಚಿವ ಉಮೇಶ್ ಕತ್ತಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.