Breaking News

ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಕ್ರಮ ಪ್ರಶ್ನಿಸಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Spread the love

ಬೆಂಗಳೂರು: ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುತ್ತಿದ್ದ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಕ್ರಮ ಪ್ರಶ್ನಿಸಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ವಕೀಲ ಜಿ.ಬಾಲಾಜಿ ನಾಯ್ಡು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ಪೀಠ ಅರ್ಜಿ ವಜಾಗೊಳಿಸಿದೆ.

ನ್ಯಾಯಾಲಯದ ನಿರ್ದೇಶನದಂತೆ ಅರ್ಜಿಯನ್ನು ಸರ್ಕಾರ ಮನವಿಯನ್ನಾಗಿ ಪರಿಗಣಿಸಿತ್ತು. ಆದರೆ ಯಾವುದೇ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಅಥವಾ ಆಡಳಿತಾತ್ಮಕ ಅಧಿಕಾರ ದುರ್ಬಳಕೆಯಾಗಿರುವ ಬಗ್ಗೆ ಸಾಕ್ಷಾಧಾರಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಮನವಿ ತಿರಸ್ಕರಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅರ್ಜಿ ಊರ್ಜಿತವಾಗಲ್ಲ ಎಂದು ವಜಾಗೊಳಿಸಿದೆ.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ ಶಶಿಕಲಾ ಜೊಲ್ಲೆ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಚಿವರ ವಿರುದ್ಧ ಪಿಐಎಲ್ ಸಲ್ಲಿಕೆಯಾಗಿತ್ತು.


Spread the love

About Laxminews 24x7

Check Also

ಜಾತಿ ನಿಂದನೆ ಆರೋಪದಡಿ ವಕೀಲ ಕೆ.ಎನ್​​​. ಜಗದೀಶ್​​​​ ಬಂಧನ

Spread the love ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಿಗ್​ಬಾಸ್​​​ ಮಾಜಿ ಸ್ಪರ್ಧಿ, ವಕೀಲ ಕೆ.ಎನ್​. ಜಗದೀಶ್​​ ಅವರನ್ನು ಕೊಡಿಗೆಹಳ್ಳಿ ಠಾಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ