ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ಕಣ ರಂಗೇರಿದೆ. ಅಭ್ಯರ್ಥಿಗಳು ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ಚಿಂತಕರ ಚಾವಡಿ ಎಂದೇ ಕರೆಯಿಸಿಕೊಳ್ಳುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸದ್ಯ ಹಣದ ಹೊಳೆಯೇ ಹರಿಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ.
ಅಭ್ಯರ್ಥಿಗಳು ಹಣ ನೀಡಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ, ಪಡೆದ ಹಣಕ್ಕೆ ಮೋಸ ಮಾಡಬಾರದು ಎಂದು ದೇವರ ಮೇಲೆ ಆಣೆ ಮಾಡಿಸಿಕೊಳ್ಳುತ್ತಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರ – ಕೋಲಾರ ವಿಧಾನಪರಿಷತ್ ಕ್ಷೇತ್ರದಲ್ಲಿ ಬೆಳಕಿಗೆ ಬಂದಿದ
ಬಾಗೇಪಲ್ಲಿ ತಾಲೂಕಿನ ಪರಗೋಡು ಎಂಬಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಅವರಿಗೆ ಸೇರಿದ್ದ ಫಾರಂ ಹೌಸ್ ನಲ್ಲಿ ಚುನಾವಣೆಯ ಗುಪ್ತ ಸಭೆ ನಡೆದಿತ್ತು. ಅಲ್ಲಿ ಮತದಾರರನ್ನು ಕೂಡ ಕರೆಯಿಸಲಾಗಿತ್ತು. ಬಂದ ಮತದಾರರಿಗೆ ಬಿಜೆಪಿ ಅಭ್ಯರ್ಥಿ ಪರ ಮತ ಹಾಕಬೇಕೆಂದು 7500 ರೂ. ಹಣ ನೀಡಿ ಅದರೊಂದಿಗೆ ತಿರುಪತಿ ಲಡ್ಡು ಕೊಟ್ಟು, ದೇವರ ಫೋಟೋ ಇಟ್ಟು ಆಣೆ ಮಾಡಿಸಿಕೊಳ್ಳಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.