Breaking News

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ವಾರದ ಬಳಿಕ ನಿರ್ಧಾರ, ರಾಜ್ಯದ ಹಾಸ್ಟೇಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿ: ಬೊಮ್ಮಾಯಿ

Spread the love

ಬೆಂಗಳೂರು: ರಾಜ್ಯದ ಹಾಸ್ಟೇಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಾಸ್ಟೇಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಹಾಸ್ಟೇಲ್ ನಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ. ಅಂತರ ಪಾಲಿಸಿಕೊಂಡು ಹೋಗಬೇಕು. ಹಾಸ್ಟೇಲ್ ಸಿಬ್ಬಂದಿ ಗಳಿಗೆ 2 ಡೋಸ್ ಲಸಿಕೆ ಕಡ್ಡಾಯ ಎಂದು ತಿಳಿಸಿದರು.

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರವಾಗಿಲ್ಲ, ಇನ್ನೂ ಒಂದು ವಾರದ ಬೆಳವಣಿಗೆ ಅವಲೋಕಿಸಿ ಕರ್ಫ್ಯೂ ಬಗ್ಗೆ ನಿರ್ಧರಿಸಲಾಗುವುದು. ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಮೂವರಿಗೆ ಕೋವಿಡ್ ಪಾಸಿಟಿವ್ ಬಂದರೆ ಕ್ಲಸ್ಟರ್ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಇನ್ನು ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಬಗ್ಗೆ ವಾರದ ಬಳಿಕ ನಿರ್ಧರಿಸಲಾಗುವುದು. ಸಧ್ಯಕ್ಕೆ ಯಾವುದೇ ಹೊಸ ನಿರ್ಬಂಧಗಳನ್ನು ಜಾರಿ ಮಾಡಿಲ್ಲ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ