Breaking News

ಲೈಂಗಿಕ ಕಿರುಕುಳದ ದೂರಿನಲ್ಲಿ ಸತ್ಯಾಂಶವಿದ್ದರೆ, ಆ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು

Spread the love

ಪಣಜಿ: ಲೈಂಗಿಕ ಹಗರಣದಲ್ಲಿ ತೊಡಗಿಕೊಂಡಿರುವ ಕುರಿತಾಗಿ ಪ್ರತಿಪಕ್ಷಗಳು ಬಿಜೆಪಿ ಸಚಿವರೊಬ್ಬರ ವಿರುದ್ಧ ಆರೋಪ ಮಾಡುತ್ತಿವೆ, ಆದರೆ ಇದುವರೆಗೂ ಹೆಸರು ಬಹಿರಂಗ ಪಡಿಸಿಲ್ಲ. ಸಚಿವರ ವಿರುದ್ಧ ಲೈಂಗಿಕ ಕಿರುಕುಳದ ದೂರು ಬಂದರೆ ತನಿಖೆ ನಡೆಸಿ, ಅದರಲ್ಲಿ ಸತ್ಯಾಂಶವಿದ್ದರೆ ಆ ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಸ್ಪಷ್ಟಪಡಿಸಿದ್ದಾರೆ.

 

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತಾಡಿರುವ ಅವರು- ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ದೂರು ನೀಡಲು ಮುಂದೆ ಬಂದರೆ ಅಥವಾ ಯಾರಾದರೂ ದೃಢವಾದ ಸಾಕ್ಷ್ಯದೊಂದಿಗೆ ದೂರು ನೀಡಿದರೆ ಸಚಿವರನ್ನು ಸಂಪುಟದಿಂದ ಕೈಬಿಡಲು ನಾನು ಹಿಂಜರಿಯುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲಾಗುವುದು. ಆದರೆ ಪ್ರತಿಪಕ್ಷಗಳು ಆರೋಪ ಮಾಡುವುದು ರಾಜಕೀಯ ಪ್ರೇರಿತವಾಗಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ಆರೋಪಗಳು ಸಾಮಾನ್ಯವಾಗಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರದ ಸಚಿವರೊಬ್ಬರು ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದಾರೆ. 15 ದಿನಗಳ ಒಳಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಎಲ್ಲವನ್ನೂ ಬಹಿರಂಗ ಪಡಿಸಲಿರುವುದಾಗಿ ಎಂದು ಕಾಂಗ್ರೇಸ್ ರಾಜ್ಯಾಧ್ಯಕ್ಷ ಗಿರೀಶ್ ಚೋಡಣಕರ್ ಹೇಳಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ