Breaking News

ಚಿಂತಾಮಣಿ ಮಾರುಕಟ್ಟೆಯಲ್ಲಿ ಟೊಮೆಟೊ ಕದ್ದ ಖಾಕಿ ಸಮವಸ್ತ್ರಧಾರಿ

Spread the love

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಎಪಿಎಂಸಿ ಮಾರುಕಟ್ಟೆಯಲ್ಲಿ ಖಾಕಿ ಸಮವಸ್ತ್ರ ಧರಿಸಿದ ವ್ಯಕ್ತಿಯೋರ್ವ ಟೊಮೆಟೊ ಕಳ್ಳತನ ಮಾಡುತ್ತಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ನಗರದ ಎಪಿಎಂಸಿ ಮಾರುಕಟ್ಟೆಯ ಟೊಮೆಟೊ ಮಾರ್ಕೆಟ್‍ನಲ್ಲಿ ಬೆಳಿಗ್ಗೆ ಹರಾಜು ಮಾಡಲು ರೈತರೊಬ್ಬರು ಕ್ರೇಟ್‍ಗಳನ್ನು ದಾಸ್ತಾನು ಮಾಡಿದ್ದರು. ಕ್ರೇಟ್‍ಗಳಿಗೆ ಹೊದಿಕೆಯಿಂದ ಮುಚ್ಚಿದ್ದರು. ಆದರೆ ರಾತ್ರಿ ವೇಳೆ ಖಾಕಿ ಸಮವಸ್ತ್ರ ಧರಿಸಿರುವ ವ್ಯಕ್ತಿ ಹಾಗೂ ಇನ್ನೋರ್ವ ಸೇರಿಕೊಂಡು ಕಳ್ಳತನಕ್ಕೆ ಇಳಿದಿದ್ದಾರೆ. ಮಾರುಕಟ್ಟೆ ಸಿಬ್ಬಂದಿ ನಿದ್ರೆಗೆ ಜಾರಿದ ವೇಳೆ ಇಬ್ಬರು ಕರಾಮತ್ತು ತೋರಿದ್ದಾರೆ.

ಕಳೆದ 10 ದಿನಗಳ‌ ಹಿಂದೆ ಟೊಮೆಟೊ ಕದಿಯುತ್ತಿದ್ದ ವ್ಯಕ್ತಿಯನ್ನು ಹಿಡಿದು ಬುದ್ಧಿವಾದ ಹೇಳಿ ಕಳುಹಿಸಲಾಗಿತ್ತು. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಚಿಂತಾಮಣಿ ನಗರ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ