ಮೈಸೂರು: ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.ಪರಿಹಾರ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ 7 ದಿನಗಳ ಒಳಗೆ ತನಿಖೆ ನಡೆಸಿ ವರದಿ ನೀಡಲು ಮೈಸೂರು ಜಿಲ್ಲಾ ಪ್ರಾದೇಶಿಕ ಆಯ್ತಕರಿಗೆ ಸಿಎಂ ಆದೇಶಿಸಿದ್ದಾರೆ. ಅನುಕಂಪದ ಆಧಾರದ ಮೇಲೆ ಕುಟುಂಬ ಅವಲಂಬಿತರಿಗೆ ಹುದ್ದೆ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಈಗಾಗಲೇ ಸಿಎಂ ಬಿಎಸ್‍ವೈ ದೈವಾಧೀನರಾದ ಆರೋಗ್ಯಾಧಿಕಾರಿ ಶ್ರೀ ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಧನ ಹಾಗು ಮೃತರ ಶ್ರೀಮತಿಯವರಿಗೆ ಸಬ್ ರಿಜಿಸ್ಟ್ರಾರ್ ಉದ್ಯೋಗ ನೀಡಲು ಭರವಸೆ ನೀಡಿದ್ದಾರೆ. ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.