Breaking News
Home / ಜಿಲ್ಲೆ / ಬೆಳಗಾವಿ / ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: d.c…

ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: d.c…

Spread the love

ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, ಸಂಗೀತ, ನೃತ್ಯ, ಮುಂತಾದ ಮನರಂಜನಾ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.ಗಣೇಶ ಮೂರ್ತಿಯನ್ನು ತಮ್ಮ ಮನೆಯ ಆವರಣದಲ್ಲಿ, ನೀರಿನ ಬ್ಯಾರಲ್, ಬಕೆಟ್‍ಗಳಲ್ಲಿ ವಿಸರ್ಜನೆ ಮಾಡಬೇಕು. ಯಾವುದೇ ರೀತಿಯಾಗಿ ಜನ ಸಂದಣಿ ಉಂಟು ಮಾಡಬಾರದು. ಭಕ್ತಾದಿಗಳಿಗೆ ಸ್ಯಾನಿಟೈಸರ್, ಮಾಸ್ಕ್ ಧರಿಸಲು ಸೂಚಿಸಬೇಕು, ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು, ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

Spread the loveಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ