Breaking News

ರಾಜ್ಯದ ‘ಸರ್ಕಾರಿ ನೌಕರ’ರಿಗೆ ಭರ್ಜರಿ ಗುಡ್ ನ್ಯೂಸ್: ಮುಂಬಡ್ತಿಯ ಮಿತಿ ಶೇ.25 ರಿಂದ 30ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ಭರ್ತಿಗೆ ಸಂಬಂಧ ಇದ್ದಂತ ರಿಕ್ತ ಸ್ಥಾನ ಆಧಾರಿತ ವರ್ಗೀಕರಣವನ್ನು ರದ್ದು ಪಡಿಸಿದ್ದು, ಇದರ ಬದಲಾಗಿ ಹುದ್ದೆ ಆಧಾರಿತ ( ಪೋಸ್ಟ್ ಬೇಸ್ಡ್ ) ವರ್ಗೀಕರಣಕ್ಕೆ ಅವಕಾಶ ನೀಡಲಾಗಿದೆ.

ಅಲ್ಲದೇ ಮುಂಬಡ್ತಿಗೆ ಇದ್ದಂತ ಶೇ.25ರ ಮಿತಿಯನ್ನು ಶೇ.30ಕ್ಕೆ ಹೆಚ್ಚಳ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

 

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಿ.ಹೇಮಲತ ಅಧಿಕೃತ ಜ್ಞಾಪನೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಾಗ ರಿಕ್ತ ಸ್ಥಾನ ಆಧಾರಿತ ವರ್ಗೀಕರಣದ ಬದಲಾಗಿ ಹುದ್ದೆ ಆಧಾರಿತ ವರ್ಗೀಕರಣ ಮಾಡುವಂತೆ ಸೂಚಿಸಿದ್ದಾರೆ.

 

ರಾಜ್ಯ ಸರ್ಕಾರದ ಈ ಆದೇಶದಿಂದಾಗಿ ಸರ್ಕಾರಿ ನೌಕರರ ಬಡ್ತಿ ಸಮಸ್ಯೆಗೆ ಇದ್ದಂತ ದೊಡ್ಡ ಸಮಸ್ಯೆಗೆ ಪರಿಹಾರ ಸಿಕ್ಕಂತೆ ಆಗಿದೆ. ಇದರಿಂದಾಗಿ ನೌಕರರಿಗೆ ಮುಂಬಡ್ತಿ ಅವಕಾಶಗಳು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುವಂತೆ ಆಗಿದೆ.

 

ಅಂದಾಹಗೇ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಈ ಸಂಬಂಧ ಮನವಿ ಮಾಡಲಾಗಿತ್ತು. ಈ ಮನವಿ ಪರಿಶೀಲಿಸಿದಂತ ಸಿಎಂ, ಸಿವಿಲ್ ಸೇವೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಾಗ ರಿಕ್ತ ಸ್ಥಾನ ಆಧಾರಿತ ವರ್ಗೀಕರಣದ ಬದಲಾಗಿ ಹುದ್ದೆ ವರ್ಗೀಕರಣವನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಸೂಚನೆಯ ಹಿನ್ನಲೆಯಲ್ಲಿ ರಿಕ್ತ ಸ್ಥಆನದ ಹುದ್ದೆಗಳನ್ನು ಪೋಸ್ಟ್ ಬೇಸ್ಡ್ ಹುದ್ದೆಗಳನ್ನಾಗಿ ವರ್ಗೀಕರಿಸಿ, ಮುಂಬಡ್ತಿಗೆ ಪರಿಗಣಿಸಲಾಗಿದೆ.

 

ಈ ಆದೇಶದಿಂದಾಗಿ ರಾಜ್ಯದ ಎಲ್ಲಾ ಇಲಾಖೆಗಳಲ್ಲಿನ ಸರ್ಕಾರಿ ನೌಕರರಿಗೆ ಶೇ.25 ರಿಂದ 30ರವೆರೆಗ ಮುಂಬಡ್ತಿಗೆ ಅವಕಾಶಗಳು ಹೆಚ್ಚಾಗಲಿವೆ. ಪ್ರತಿ ಇಲಾಖೆಯ ಸಾವಿರಾರೂ ನೌಕರರಿಗೆ ಮುಂಬಡ್ತಿ ಅವಕಾಶ ದೊರೆಯುವಂತೆ ಆಗಲಿದೆ.

      

    


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ