ಬೆಳಗಾವಿಯಲ್ಲಿ (Belagavi) ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ (Winter session) ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುವಂತೆ ಧಾರ್ಮಿಕ ಮುಖಂಡರು ಹಾಗೂ ಮಠಾಧೀಶರು ಒತ್ತಡ ತಂದಿದ್ದು, ಈ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಕರಡು ಸಿದ್ದಪಡಿಸಲಾಗಿದ್ದು, ಕಾನೂನು ಪರಾಮರ್ಶೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು, ಮತಾಂತರ ನಿಷೇಧ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಮತಾಂತರ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಂಶವನ್ನು ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.