ಬೆಳಗಾವಿ: ನಡು ರಸ್ತೆಯಲ್ಲೇ ಜೋಡು ಕುದುರೆ ರೇಸ್ ಆಯೋಜಿಸಿದವರ ಮೇಲೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶ್ರೀ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಕುದುರೆ ರೇಸ್ ಅನ್ನು ಬೆಳಗಾವಿ-ಚಿಕ್ಕೋಡಿ ರಾಜ್ಯ ಹೆದ್ದಾರಿ ತಡೆದು ರೇಸ್ ಆಯೋಜನೆ ಮಾಡಲಾಗಿತ್ತು. ಇದರಿಂದಾಗಿ ಕೆಲ ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಬಂದ್ ಆಗಿ ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಜನರ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.