Breaking News

ಕ್ರಿಸ್​ಮಸ್​, ಹೊಸ ವರ್ಷ ಅದ್ದೂರಿಯಾಗಿ ಆಚರಿಸಲು ಈ ಬಾರಿಯೂ ಅವಕಾಶವಿಲ್ಲ -ಗೌರವ್ ಗುಪ್ತಾ

Spread the love

ಬೆಂಗಳೂರು: ಒಮಿಕ್ರಾನ್​ ಆತಂಕ ಹಿನ್ನೆಲೆ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷ ಮತ್ತು ಕ್ರಿಸ್​ಮಸ್​ಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ. ಈ ಬಾರಿಯೂ ಅದ್ದೂರಿಯಾಗಿ ಆಚರಿಸಲು ಅವಕಾಶ ಇಲ್ಲ ಎಂದು ಪಾಲಿಕೆ ಆಯುಕ್ತ ಗೌರವ್​ ಗುಪ್ತಾ ತಿಳಿಸಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್​ ರೂಪಾಂತರಿ ತಳಿಯ ಆತಂಕವಿದೆ. ಇದುವರೆಗೂ ಬಿಬಿಎಂಪಿಗೆ ಆಚರಣೆಗೆ ಅನುಮತಿ ಕೋರಿ ಯಾವುದೇ ಮನವಿಗಳು ಬಂದಿಲ್ಲ ಎಂದಿದ್ದಾರೆ. ಕೊರೊನಾದ ಈ ಪರಿಸ್ಥಿತಿಯಲ್ಲಿ ಆಚರಣೆಗೆ ಅವಕಾಶ ಕೊಡುವುದು ಬೇಡವೋ ಎಂಬುದು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ