Breaking News

ಸುಮಾರು 5 ನೂರಕ್ಕೂ ಅಧಿಕ ರೈತರು ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ

Spread the love

ಹಾವೇರಿ : ಪ್ರಮುಖ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರವು ವಾಪಸ್​ ಪಡೆಯುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಪೂಜಾರ್ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಸುಮಾರು 500 ಅಧಿಕ ರೈತರು ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ರವಾನಿಸಿದರು. ಕೇಂದ್ರ ಸರ್ಕಾರ ವಾಪಸ್ ಪಡೆದಂತೆ ರಾಜ್ಯ ಸರ್ಕಾರ ಸಹ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು. ವಾಪಸ್ ಪಡೆಯುವವರೆಗೆ ಪ್ರತಿಭಟನೆ ಮುಂದುವರೆಸುವದಾಗಿ ಮಾಲತೇಶ್ ಪೂಜಾರ್ ತಿಳಿಸಿದರು.

ಇದೇ ವೇಳೆ ಭತ್ತ ಮತ್ತು ಗೋವಿನಜೋಳ ಬೆಂಬಲ ಬೆಲೆಯಲ್ಲಿ ಖರೀದಿಸಬೇಕು. ಹಾಗೂ ಅಕಾಲಿಕ ಮಳೆಯಿಂದ ಹಾನಿಗೊಳಗಾದ ರೈತರಿಗೆ ಶೀಘ್ರವಾಗಿ ಪರಿಹಾರ ವಿತರಿಸುವಂತೆ ಮಾಲತೇಶ್ ಆಗ್ರಹಿಸಿದರು. ಸರ್ಕಾರ ರೈತರನ್ನ ಕಡೆಗಣಿಸಿದ್ದೆ ಆದರೆ ದೆಹಲಿ ಮಾದರಿಯ ಹೋರಾಟ ರೂಪಿಸುವುದಾಗಿ ಎಚ್ಚಕರಿಕೆ ನೀಡಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ