ಬೆಂಗಳೂರು: ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನಿಗಧಿಯಂತೆ ಡಿಸೆಂಬರ್ 13 ರಿಂದ 24ರವರೆಗೆ ಬೆಳಗಾವಿಯಲ್ಲಿ ನಡೆಸಲಾಗುತ್ತದೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸೋದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,ನಿಗದಿಯಂತೆ ಡಿಸೆಂಬರ್ 13ರಿಂದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲೇ ನಡೆಸಲಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ರೇಟ್ ದುಬಾರಿ ದರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದ್ರೇ ನಮ್ಮಲ್ಲೇ ಅತ್ಯಂತ ಕಡಿಮೆ ಇದೆ. ತಂತ್ರಜ್ಞಾನ ಆಧಾರಿತ ಪರೀಕ್ಷೆಗೆ ದರ ಸ್ವಲ್ಪ ಹೆಚ್ಚಿದೆ ಅಷ್ಟೇ ಎಂದು ಹೇಳಿದರು.
Laxmi News 24×7