Breaking News

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆಯಾಗುತ್ತದೆ: ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ: ನಾಳೆಯಿಂದ ಬೆಳಗಾವಿ ಅಧಿವೇಶ ಆರಂಭವಾಗುತ್ತದೆ. ಈಗಾಗಲೇ ಎಲ್ಲಾ ತಯಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯ ನಾಯಕರಿಗೆ ನಾನು ಹೇಳಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗಲ್ಲ. ಬದಲಾಗಿ ಬಡತನವನ್ನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಆಸೆ ಆಮಿಷವೊಡ್ಡಿ ಮತಾಂತರ ಮಾಡಲು ಅವಕಾಶವಿಲ್ಲ.

ಮತಾಂತರ ಕಾಯ್ದೆ ಚರ್ಚೆಗೂ ಮೊದಲು ಒಂದು ಕಮಿಟಿ ಮಾಡಿದ್ದೇವೆ. ಕಾನೂನು ಇಲಾಖೆ ಕಮಿಟಿ ಪರಿಶೀಲನೆ ಮಾಡುತ್ತಿದೆ. ಆ ವರದಿ ನಮ್ಮ ಕ್ಯಾಬಿನೆಟ್​​ಗೆ ಬರುತ್ತದೆ. ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ‌. ಅಲ್ಲಿಂದ ಅಸೆಂಬ್ಲಿಗೆ ಬಂದ್ರೆ ಬೆಳಗಾವಿಯಲ್ಲೇ ಚರ್ಚೆ ಮಾಡುತ್ತೇವೆ. ಯಾವ ಧರ್ಮಕ್ಕೂ ಆತಂಕವಾಗಬಾರದು‌. ಮತಾಂತರ ಎನ್ನೋದು ಸಮಾಜಕ್ಕೆ ಒಳ್ಳೆಯದಲ್ಲ. ಕಾನೂನನ್ನ ತರುವ ಪ್ರಯತ್ನವನ್ನ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಒಮಿಕ್ರಾನ್ ಟೆಸ್ಟಿಂಗ್ ಲ್ಯಾಬ್ ಗಳನ್ನ ಹೆಚ್ಚಿಗೆ ಮಾಡುತ್ತೇವೆ. ಈಗಾಗಲೇ ಒಂದು ಜಿನೊಮಿಕ್ ಸೀಕ್ವೇನ್ಸ್ ಲ್ಯಾಬ್ ಇದ್ದು, ಅವುಗಳನ್ನು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಮೋದಿ ಟ್ವಿಟರ್ ಹ್ಯಾಕ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಈಗಾಗಲೇ ಪ್ರಧಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಅದರ ವಿರುದ್ಧ ಕಾರ್ಯಾಚರಣೆ ಕೂಡ ಮಾಡಿದ್ದಾರೆ. ಈ ರೀತಿ ಅಲ್ಲಲ್ಲಿ ಘಟನೆಗಳು ಆಗುತ್ತಿವೆ. ತಾಂತ್ರಿಕ ಬಲದಿಂದ ಅವುಗಳನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ