Breaking News

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ ಸಂಕಷ್ಟ

Spread the love

ಬೆಂಗಳೂರು: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರಿಗೆ ಸಂಕಷ್ಟ ಎದುರಾಗಿದ್ದು, ಸಾಲದ ಹಣ ವಾಪಸ್ ನೀಡುವಂತೆ ಕೊರ್ಟ್ ಆದೇಶ ನೀಡಿದೆ.

2013ರಲ್ಲಿ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ಅವರಿಂದ ದ್ವಾರಕೀಶ್ ಸಾಲ ಪಡೆದುಕೊಂಡಿದ್ದರು. ‘ಚಾರುಲತಾ’ ಸಿನಿಮಾ ಬಿಡುಗಡೆಗಾಗಿ 50 ಲಕ್ಷರೂ ಮೊತ್ತ ಪಡೆದುಕೊಂಡಿದ್ದರು. ನಂತರ ಸಾಲದ ಹಣ ವಾಪಸ್ ನೀದದೇ ಸತಾಯಿಸಿದ್ದರು. ಅಲ್ಲದೇ ದ್ವಾರಕೀಶ್ ನೀಡಿದ್ದ ಚೆಕ್ ಕೂಡ ಸರಿಯಿರಲಿಲ್ಲ. ನಾನು ಯಾವುದೇ ಚೆಕ್ ಕೊಟ್ಟಿಲ್ಲ, ಸಹಿ ನನ್ನದಲ್ಲ ಎಂದು ಕೋರ್ಟ್ ನಲ್ಲಿ ದ್ವಾರಕೀಶ್ ವಾದಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಸಿ ಎನ್ ಚಂದ್ರಶೇಖರ್ ಕೋರ್ಟ್ ಮೆಟ್ಟಿಲೇರಿದ್ದರು.

ಸಹಿ ದ್ವಾರಕೀಶ್ ಅವರದ್ದೇ ಎಂದು ಫೊರೆನ್ಸಿಕ್ ಲ್ಯಾಬ್ ಸಾಬೀತು ಮಾಡಿತ್ತು. ಹಣ ಹಿಂದಿರುಗಿಸುವಂತೆ 2019ರಲ್ಲಿ ದ್ವಾರಕೀಶ್ ಅವರಿಗೆ ನ್ಯಾಯಾಲಯ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಸೆಷನ್ಸ್ ಕೋರ್ಟ್ ನಲ್ಲಿ ದ್ವಾರಕೀಶ್ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಒಂದು ತಿಂಗಳಲ್ಲಿ ಸಾಲದ ಹಣ ಪಾವತಿ ಮಾಡುವಂತೆ ದ್ವಾರಕೀಶ್ ಗೆ ತಾಕೀತು ಮಾಡಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ