ಬೆಂಗಳೂರು: ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ಕೊತ್ತದೊಡ್ದಿ ಗ್ರಾಮದಲ್ಲಿ ನಡೆದಿದೆ.
ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ ನಿಂದ ಪರಾರಿಯಾಗಿದ್ದಾರೆ.
ಅಪಘಾತದಲ್ಲಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.