ಹುಬ್ಬಳ್ಳಿಯಿಂದ ಕಾರ್ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಲ್ಲಿಂದ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಇದೇ ವೇಳೆ ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗುತ್ತಿದೆ. ಅಧಿವೇಶನ ವೇಳೆ ಸುವರ್ಣಸೌಧಕ್ಕೆ ರೈತರು ಮುತ್ತಿಗೆ ಹಾಕುತ್ತಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಯಿಸಿದ ಸಿಎಂ ಬೊಮ್ಮಾಯಿ ಅವರು ಪ್ರತಿ ಭಾರಿ ಅಧಿವೇಶನ ನಡೆದಾಗ ರೈತರು ತಮ್ಮ ಸಮಸ್ಯೆ ಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡುತ್ತಾರೆ ಅವರ ಅಹವಾಲು ಏನೇ ಇದ್ರು ಚರ್ಚಿಸುತ್ತೆವೆ. ಎಲ್ಲರನ್ನು ಮಾತನಾಡಿ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಕೆಲಸವನ್ನು ನಮ್ಮ ಮಂತ್ರಿ ಮಂಡಳದ ಎಲ್ಲ ಸದಸ್ಯರು ಕೂಡಿಕೊಂಡು ಮಾಡುತ್ತೇವೆ ಎಂದರು.
ಇನ್ನು ಯಾವುದೇ ವಿಷಯ ಚರ್ಚೆ ಆದ್ರೂ ಕೂಡ ಪರಿಹಾರ ರೂಪದಲ್ಲಿ ಏನೆಲ್ಲಾ ಮಾಡಲು ಸಾಧ್ಯವಿದೆಯೋ ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದರು.